'ಸೊಕ್ಕಿನ ಪರಮಾವಧಿ'.. ಸಿಖ್ ನರಮೇಧ ಕುರಿತ 'ಕೈ' ಹೇಳಿಕೆಗೆ ಪ್ರಧಾನಿ ಮೋದಿ ತೀವ್ರ ಖಂಡನೆ
ಸಿಖ್ ನರಮೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ನೀಡಿರುವ ಹೇಳಿಕೆ ಇದೀಗ ಹೊಸದೊಂದು ವಾಕ್ಸಮರಕ್ಕೆ...

Published On :
ರೋಹ್ಟಕ್: ಸಿಖ್ ನರಮೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ನೀಡಿರುವ ಹೇಳಿಕೆ ಇದೀಗ ಹೊಸದೊಂದು ವಾಕ್ಸಮರಕ್ಕೆ ನಾಂದಿ ಹಾಡಿದ್ದು, ಈ ಸಂಬಂಧ ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಪ್ರಧಾನಿ ಮೋದಿ ಮನುಷ್ಯರ ಜೀವಕ್ಕೆ ಬೆಲೆಯೇ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಇಂದು ಹರ್ಯಾಣದ ರೋಹ್ಟಕ್ ನಲ್ಲಿ ನಡೆದ ಚುನಾವಣಾ ಪ್ರಚಾರದ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕರ ಹೇಳಿಕೆ ಅವರ ಸೊಕ್ಕಿನ ಪರಮಾವಧಿಯಾಗಿದ್ದು, ಗಾಂಧಿ ಕುಟುಂಬದ ಆಪ್ತರ ಈ ಹೇಳಿಕೆ ಕಾಂಗ್ರೆಸ್ ಜನ ಸಾಮಾನ್ಯರ ಮೇಲಿರುವ ಕಾಳಜಿಯನ್ನು ಮತ್ತು ಮಾನವೀಯತೆಯನ್ನು ತೋರಿಸುತ್ತದೆ.
ಅಂದು 1984ರಲ್ಲಿ ಇದೇ ಕಾಂಗ್ರೆಸ್ ಹರ್ಯಾಣ, ಹಿಮಾಚಲ ಪ್ರದೇಶ, ಮಧ್ಯ ಪ್ರದೇಶ ಮತ್ತು ಉತ್ತರ ಪ್ರದೇಶದ ಸಿಖ್ಖರ ನರಮೇಧ ನಡೆಸಿತ್ತು. ಅಂದು ಸಾವಿರಾರು ಅಮಾಯಕ ಸಿಖ್ಕರು ತಾವೇಕೆ ಪ್ರಾಣ ಕಳೆದುಕೊಳ್ಳುತ್ತಿದ್ದೇವೆ ಎಂಬ ಅರಿವೂ ಇಲ್ಲದೇ ಸಾವನ್ನಪ್ಪಿದ್ದರು. ಕನಿಷ್ಠ ಪಕ್ಷ ಅವರ ಸಾವಿನ ಕುರಿತು ಮಾನವೀಯ ಮಾತುಗಳನ್ನೂ ಆಡಗ ಕಾಂಗ್ರೆಸ್ ಪಕ್ಷದಿಂದ ಇದನ್ನು ಬಿಟ್ಟು ಬೇರೇನು ನಿರೀಕ್ಷಿಸಲು ಸಾಧ್ಯ ಎಂದು ಮೋದಿ ಹೇಳಿದ್ದಾರೆ.
ಆ ಮೂರು ಪದಗಳು ಕಾಂಗ್ರೆಸ್ ಪಕ್ಷದ ಅಸ್ವಸ್ಥ ಮಾನಸಿಕತೆಯನ್ನು, ಕಾಂಗ್ರೆಸ್ ಪಕ್ಷದ ಅಮಾನವೀಯತೆ ಮತ್ತು ಜನರ ಕುರಿತಂತೆ ಆ ಪಕ್ಷಕ್ಕೆ ಇರುವ ಸೊಕ್ಕನ್ನು ತೋರಿಸುತ್ತದೆ ಎಂದು ಮೋದಿ ಹೇಳಿದರು.
ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸ್ಯಾಮ್ ಪಿತ್ರೋಡಾ ಅವರು, ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಈ ವೇಳೆ ಸಿಖ್ ನರಮೇಧದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಆಗಿದ್ದು ಆಗಿ ಹೋಯಿತು ಏನು ಮಾಡಲು ಸಾಧ್ಯ. ಈಗ ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಮಾಡಿರುವ ಅಭಿವೃದ್ಧಿ ಕೆಲಸಗಳ ಕುರಿತು ಮಾತನಾಡಿ ಎಂದು ಹೇಳಿದ್ದರು. ಈ ಹೇಳಿಕೆ ಇದೀಗ ರಾಜಕೀಯ ಪಕ್ಷಗಳ ಹೊಸ ವಾಕ್ಸಮರಕ್ಕೆ ನಾಂದಿ ಹಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PM Modiಪ್ರಧಾನಿ ಮೋದಿRohtak1984 Sikh riotsSam Pitrodaಸ್ಯಾಮ್ ಪಿತ್ರೋಡಾರೋಹ್ಟಕ್ಲೋಕಸಭಾ ಚುನಾವಣೆ 2019Loksabha Election 20191984 ಸಿಖ್ ನವರಮೇಧ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


