ಟಿಕೆಟ್ ಗಾಗಿ ನನ್ನ ತಂದೆಯಿಂದ ಕೇಜ್ರಿವಾಲ್ ಗೆ 6 ಕೋಟಿ: ಆಪ್ ಅಭ್ಯರ್ಥಿಯ ಪುತ್ರ!
ದೆಹಲಿಯಲ್ಲಿ ಲೋಕಸಭಾ ಚುನಾವಣೆ ಮತದಾನಕ್ಕೂ ಮುನ್ನ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗುವ ಬೆಳವಣಿಗೆ ನಡೆದಿದೆ.

Published On :
ನವದೆಹಲಿ: ದೆಹಲಿಯಲ್ಲಿ ಲೋಕಸಭಾ ಚುನಾವಣೆ ಮತದಾನಕ್ಕೂ ಮುನ್ನ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗುವ ಬೆಳವಣಿಗೆ ನಡೆದಿದೆ.
ಪಶ್ಚಿಮ ದೆಹಲಿಯಿಂದ ಚುನಾವಣೆಗೆ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಬಲ್ ಬೀರ್ ಸಿಂಗ್ ಜಖಾರ್ ಅವರ ಪುತ್ರ ಉದಯ್ ಆಪ್ ಮುಖ್ಯಸ್ಥ, ಸಿಎಂ ಕೇಜ್ರಿವಾಲ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ನನ್ನ ತಂದೆ ಟಿಕೆಟ್ ಪಡೆಯುವುದಕ್ಕಾಗಿ ಆಮ್ ಆದ್ಮಿ ಪಕ್ಷದ ನಾಯಕ ಕೇಜ್ರಿವಾಲ್ ಗೆ 6 ಕೋಟಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಟಿಕೆಟ್ ಪಡೆಯುವುದಕ್ಕಾಗಿ ಕೇಜ್ರಿವಾಲ್ ಗೆ 6 ಕೋಟಿ ರೂಪಾಯಿ ನೀಡಿದ್ದೇನೆ ಎಂದು ಸ್ವತಃ ನನ್ನ ತಂದೆಯೇ ನನ್ನ ಬಳಿ ಹೇಳಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಡಿದ್ದ ಕೇಜ್ರಿವಾಲ್ ಹಣ ಪಡೆದು ಭ್ರಷ್ಟರಾಗಿದ್ದಾರೆ ಎಂದು ಉದಯ್ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅರವಿಂದ್ ಕೇಜ್ರಿವಾಲ್ದೆಹಲಿDelhiAravind KejriwalLok Sabha Elections 2019ಲೋಕಸಭಾ ಚುನಾವಣೆ 2019AAP candidate\'s sonಆಮ್ ಆದ್ಮಿ ಅಭ್ಯರ್ಥಿಯ ಪುತ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


