ಕೆಟ್ಟು ನಿಂತ ತಮ್ಮ ಹೆಲಿಕಾಪ್ಟರ್ ರಿಪೇರಿ ಮಾಡಿದ ರಾಹುಲ್ ಗಾಂಧಿ, ಫೋಟೋ ವೈರಲ್
ಲೋಕಸಭಾ ಚುನಾವಣೆ ಪ್ರಚಾರದಲ್ಲಿ ನಿರತರಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಫೋಟೋವೊಂದನ್ನು...

Published On :
ಲಖನೌ: ಲೋಕಸಭಾ ಚುನಾವಣೆ ಪ್ರಚಾರದಲ್ಲಿ ನಿರತರಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದು, ಹಿಮಾಚಲ ಪ್ರದೇಶದ ಊನದಲ್ಲಿ ತಮ್ಮ ಹೆಲಿಕಾಪ್ಟರ್ಅನ್ನು ತಾವೇ ರಿಪೇರಿ ಮಾಡುತ್ತಿರುವ ದೃಶ್ಯ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.
ನಿನ್ನೆ ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಈ ವೇಳೆ ರಾಹುಲ್ ಗಾಂಧಿ ಮತ್ತು ಅವರ ಜೊತೆಗೆ ಇದ್ದವರೆಲ್ಲಾ ಹೆಲಿಕಾಪ್ಟರ್ ರಿಪೇರಿ ಮಾಡಲು ಸಹಾಯ ಮಾಡಿದ್ದಾರೆ.
ರಾಹುಲ್ ಗಾಂಧಿ ಅವರು ತಾವು ರಿಪೇರಿ ಕೆಲಸದಲ್ಲಿ ನಿರತರಾಗಿರುವ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಹಾಕಿದ್ದು, ಅದಕ್ಕೆ "ಉತ್ತಮ ಒಗ್ಗಟ್ಟಿನ ಕೆಲಸದ ಮೂಲಕ ಸಮಸ್ಯೆ ಸರಿಪಡಿಸಲಾಗಿದೆ," ಎಂದು ಶೀರ್ಷಿಕೆ ನೀಡಿದ್ದಾರೆ.
"ಒಗ್ಗಟ್ಟಿನ ಕೆಲಸ ಅಂದರೆ ಡೆಕ್ನಲ್ಲಿ ಇದ್ದವರೆಲ್ಲರೂ ಕೈ ಜೋಡಿಸಿ, ಹೆಲಿಕಾಪ್ಟರ್ನಲ್ಲಿ ಕಾಣಿಸಿಕೊಂಡ ಸಮಸ್ಯೆಯನ್ನು ಬಗೆಹರಿಸಿದ್ದೇವೆ. ಒಗ್ಗಟಿನಿಂದ ಕೆಲಸ ಮಾಡಿದರೆ ಶೀಘ್ರದಲ್ಲಿ ಎಲ್ಲ ಸಮಸ್ಯೆ ಪರಿಹಾರ ಆಗಲಿವೆ. ಗಂಭೀರವಾದ ಸಮಸ್ಯೆ ಏನಿಲ್ಲ, ಧನ್ಯವಾದಗಳು," ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


