ಲೋಕ ಸಮರ: 6ನೇ ಹಂತದ ಮತದಾನ, ಕಣದಲ್ಲಿ ಘಟಾನುಘಟಿ ನಾಯಕರು
ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 6ನೇ ಹಂತದ ಮತದಾನದಲ್ಲಿ ಘಟಾನುಘಟಿ ನಾಯಕರು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

Published On :
ನವದೆಹಲಿ: ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 6ನೇ ಹಂತದ ಮತದಾನದಲ್ಲಿ ಘಟಾನುಘಟಿ ನಾಯಕರು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ದೇಶದ ಏಳು ರಾಜ್ಯಗಳ ಒಟ್ಟು 59 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಉತ್ತರ ಪ್ರದೇಶದಲ್ಲಿನ 14 ಕ್ಷೇತ್ರ, ಹರಿಯಾಣದ 10 ಕ್ಷೇತ್ರ, ಪಶ್ಚಿಮ ಬಂಗಾಳ, ಬಿಹಾರ, ಮಧ್ಯ ಪ್ರದೇಶದ ತಲಾ 8 ಕ್ಷೇತ್ರ, ದೆಹಲಿಯ 7ಕ್ಷೇತ್ರ, ಮತ್ತು ಜಾರ್ಖಂಡ್ ನ 4 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಪ್ರಸ್ತುತ ಇಡೀ ದೇಶದ ಕಣ್ಣು ದೇಶದ ರಾಜಧಾನಿ ಮೇಲೆ ನೆಟ್ಟಿದೆ. ದೆಹಲಿಯಲ್ಲಿ ಒಟ್ಟು 7 ಲೋಕಸಭಾ ಕ್ಷೇತ್ರಗಳಿದ್ದು, ಕಾಂಗ್ರೆಸ್, ಆಪ್ ಮತ್ತು ಬಿಜೆಪಿ ಪಕ್ಷಗಳು ಪ್ರತ್ಯೇಕವಾಗಿ ಚುನಾವಣೆ ಎದುರಿಸುತ್ತಿವೆ. ಗೌತಮ್ ಗಂಭೀರ್, ಶೀಲಾ ದೀಕ್ಷಿತ್, ಬಾಕ್ಸರ್ ವಿಜಯೇಂದರ್ ಸಿಂಗ್, ಕೇಂದ್ರ ಮಂತ್ರಿ ಹರ್ಷ ವರ್ಧನ್, ಎಎಪಿಯ ಆತಿಶಿ ಇನ್ನೂ ಹಲವರು ಕಣದಲ್ಲಿದ್ದಾರೆ.
ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಮತ್ತು ಮನೇಕಾ ಗಾಂಧಿ ಸೇರಿದಂತೆ ಪ್ರಮುಖರು ಕಣದಲ್ಲಿದ್ದು, ಮಧ್ಯಪ್ರದೇಶದ ಭೂಪಾಲ್ ನಲ್ಲಿ ಸಾದ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ದಿಗ್ವಿಜಯ್ ಸಿಂಗ್ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಜತೆಗೆ ಜ್ಯೋತಿರಾದಿತ್ಯ ಸಿಂಧ್ಯಾ, ಕೇಂದ್ರ ಮಂತ್ರಿ ನರೇಂದ್ರ ಸಿಂಗ್ ತೋಮರ್ ಅವರುಗಳ ಭವಿಷ್ಯವೂ ಇಂದೇ ನಿರ್ಧಾರವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew Delhibjpಬಿಜೆಪಿಲೋಕಸಭಾ ಚುನಾವಣೆ 2019Loksabha Election 2019Voting Day6th Phase Votingಮತದಾನ ದಿನ6ನೇ ಹಂತದ ಮತದಾನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


