ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ವಿರುದ್ಧ ಎಫ್ಐಆರ್ ಗೆ ಚುನಾವಣಾ ಆಯೋಗದ ಸೂಚನೆ
ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ವಿರುದ್ಧ ಎಫ್ಐಆರ್ ಗೆ ಚುನಾವಣಾ ಆಯೋಗದ ಸೂಚನೆ

Published On :
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ತಮ್ಮ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಲು ಯತ್ನಿಸಿದ್ದಾರೆಂದು ಕಣ್ಣೀರಿಟ್ಟಿದ್ದ ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ವಿರುದ್ಧ ಎಫ್ಐಆರ್ ದಾಖಲಿಸಲು ಚುನಾವಣಾ ಆಯೋಗ ಸೂಚನೆ ನೀಡಿದೆ.
ಪಶ್ಚಿಮ ಬಂಗಾಳದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಘಟಾಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಐಪಿಎಸ್ ಅಧಿಕಾರಿ ಭಾರತಿ ಘೋಷ್ ಕಣಕ್ಕಿಳಿದಿದ್ದಾರೆ.
ಮತದಾನದ ವೇಳೆ ಭದ್ರತಾ ಸಿಬ್ಬಂದಿಗಳ ಜೊತೆ ಮತಗಟ್ಟೆಯನ್ನು ಪ್ರವೇಶಿಸಿದ ಭಾರತಿ ಘೋಷ್ ಮೊಬೈಲ್ ಫೋನ್ ಮೂಲಕ ವಿಡಿಯೋ ತೆಗೆಯುವುದಕ್ಕೆ ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಎಫ್ಐಆರ್ ದಾಖಲಿಸಲು ಸೂಚಿಸಿದೆ.
ಮತಗಟ್ಟೆಯಿಂದ ನನ್ನನ್ನು ಹೊರದಬ್ಬಿದರು, ಹಲ್ಲೆಗೆ ಯತ್ನಿಸಿದರು ಎಂದು ಬಿಜೆಪಿ ಅಭ್ಯರ್ಥಿ ಘೋಷ್ ಕಣ್ಣೀರಿಟ್ಟಿದ್ದಾರೆ. ತೃಣಮೂಲ ಕಾಂಗ್ರೆಸ್ ನ ಮಹಿಳಾ ಕಾರ್ಯಕರ್ತರು ಭಾರತಿ ಘೋಷ್ ಅವರನ್ನು ಸುತ್ತುವರೆದು ಹಲ್ಲೆಗೆ ಮುಂದಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪಶ್ಚಿಮ ಬಂಗಾಳWest BengalElection Commissionಚುನಾವಣಾ ಆಯೋಗFIRಎಫ್ಐಆರ್Lok Sabha Elections 2019ಲೋಕಸಭಾ ಚುನಾವಣೆ 2019Bharati Ghoshಭಾರತಿ ಘೋಷ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


