ಲೋಕಸಭಾ ಚುನಾವಣೆ 2019: 6ನೇ ಹಂತದ ಮತದಾನ, ಮಧ್ಯಾಹ್ನ 1 ಗಂಟೆ ವೇಳೆಗೆ 30.76ರಷ್ಟು ಮತದಾನ
ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 6ನೇ ಹಂತದ ಮತದಾನ ಬಿರುಸಿನಿಂದ ಸಾಗಿದ್ದು, ಮಧ್ಯಾಹ್ನ 1 ಗಂಟೆಯ ವೇಳೆಗೆ 30.76ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

Published On :
ನವದೆಹಲಿ: ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 6ನೇ ಹಂತದ ಮತದಾನ ಬಿರುಸಿನಿಂದ ಸಾಗಿದ್ದು, ಮಧ್ಯಾಹ್ನ 1 ಗಂಟೆಯ ವೇಳೆಗೆ 30.76ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
ದೇಶದ ಏಳು ರಾಜ್ಯಗಳ ಒಟ್ಟು 59 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಉತ್ತರ ಪ್ರದೇಶದಲ್ಲಿನ 14 ಕ್ಷೇತ್ರ, ಹರಿಯಾಣದ 10 ಕ್ಷೇತ್ರ, ಪಶ್ಚಿಮ ಬಂಗಾಳ, ಬಿಹಾರ, ಮಧ್ಯ ಪ್ರದೇಶದ ತಲಾ 8 ಕ್ಷೇತ್ರ, ದೆಹಲಿಯ 7ಕ್ಷೇತ್ರ, ಮತ್ತು ಜಾರ್ಖಂಡ್ ನ 4 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಮಧ್ಯಾಹ್ನ 1 ಗಂಟೆಯ ವೇಳೆಗೆ 30.76ರಷ್ಟು ಮತದಾನವಾಗಿದ್ದು, ಈ ಪೈಕಿ ಬಿಹಾರದಲ್ಲಿ ಶೇ.23.03ರಷ್ಟು, ಹರ್ಯಾಣದಲ್ಲಿ ಶೇ,31.53ರಷ್ಟು, ಮಧ್ಯ ಪ್ರದೇಶದಲ್ಲಿ ಶೇ.34.27ರಷ್ಟು. ಉತ್ತರ ಪ್ರದೇಶದಲ್ಲಿ ಶೇ. 29.36ರಷ್ಟು, ಪಶ್ಚಿಮ ಬಂಗಾಳದಲ್ಲಿ 41.14ರಷ್ಟು ಮತ್ತು ಜಾರ್ಖಂಡ್ ನಲ್ಲಿ 43.67ರಷ್ಟು ಮತದಾನವಾಗಿದೆ.
ಇನ್ನು ಕೇಂದ್ರ ಉತ್ತರ ದೆಹಲಿಯಲ್ಲಿ ಶೇ. 20.51ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew Delhibjpಬಿಜೆಪಿಲೋಕಸಭಾ ಚುನಾವಣೆ 2019Loksabha Election 2019Voting Day6th Phase Votingಮತದಾನ ದಿನ6ನೇ ಹಂತದ ಮತದಾನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


