ಲೋಕಸಭಾ ಚುನಾವಣೆ 6ನೇ ಹಂತದ ಮತದಾನ ಪ್ರಾರಂಭ: ದೆಹಲಿ ಸೇರಿ 7 ರಾಜ್ಯಗಳಲ್ಲಿ ಧುರೀಣರ ಹಣೆಬರಹ ನಿರ್ಧಾರ
ಇಂದು ಭಾರತ ಸಂಸದೀಯ ಚುನಾವಣೆಯ ಆರನೇ ಹಂತದ ಮತದಾನ ನಡೆಯುತ್ತಿದ್ದು ದೆಹಲಿ ಸೇರಿ ಏಳು ರಾಜ್ಯಗಳಲ್ಲಿ 10.7 ಕೋಟಿ ಮತದಾರರು ಮತಚಲಾವಣೆಗೆ ಸಿದ್ದವಾಗಿದ್ದಾರೆ.

Published On :
ನವದೆಹಲಿ: ಇಂದು (ಮೇ 12) ಭಾರತ ಸಂಸದೀಯ ಚುನಾವಣೆಯ ಆರನೇ ಹಂತದ ಮತದಾನ ನಡೆಯುತ್ತಿದ್ದು ದೆಹಲಿ ಸೇರಿ ಏಳು ರಾಜ್ಯಗಳಲ್ಲಿ 10.7 ಕೋಟಿ ಮತದಾರರು ಮತಚಲಾವಣೆಗೆ ಸಿದ್ದವಾಗಿದ್ದಾರೆ.
ದೆಹಲಿಯ ಎಲ್ಲಾ ಏಳು ಕ್ಷೇತ್ರಗಳು, ಮಧ್ಯಪ್ರದೇಶದ ಭೋಪಾಲ್ ಸೇರಿ ಹಲವು ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. ಭೋಪಾಲ್ ನಲ್ಲಿ ಕಾಂಗ್ರೆಸ್ ನ ದಿಗ್ವಿಜಯ ಸಿಂಗ್ ಹಾಗೂ ಬಿಜೆಪಿಯ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ನೇರಾನೇರ ಸ್ಪರ್ಧೆ ಏರ್ಪಟ್ಟಿದೆ.
ಇನ್ನು ದೆಹಲಿಲಿಯಲ್ಲಿ ಆಮ್ ಆದ್ಮಿ ಪಾರ್ಟಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋಣ ಸ್ಪರ್ಧೆ ಏರ್ಪಾಡಾಗಿದೆ. ಕಾಂಗ್ರೆಸ್ ನ ಶೀಲಾ ದೀಕ್ಷಿತ್, ಬಿಜೆಪಿಯ ಗೌತಮ್ ಗಂಭೀರ್, ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಸೇರಿ ಅನೇಕ ಪ್ರಮುಖರು ಕಣದಲ್ಲಿದ್ದಾರೆ.
ಇದಷ್ಟೇ ಅಲ್ಲದೆ ಜ್ಯೋತಿರಾದಿತ್ಯ ಸಿಂಧ್ಯಾ, ಕೆ.ಪಿ. ಯಾದವ್, ಮನೇಕಾ ಗಾಂಧಿ, ಸಂಜಯ್ ಸಿಂಗ್, ಅಖಿಲೇಶ್ ಯಾದವ್, ದಿನೇಶ್ ಲಾಲ್ ಯಾದವ್ ಮೊದಲಾದವರು ಕಣದಲ್ಲಿನ ಪ್ರಮುಖ ನಾಯಕರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


