ತಮ್ಮ ಹೆಸರು ಬದಿಗಿರಿಸಿ ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿರುವ ಜೆಡಿಯು ನಾಯಕ, ಸಿಎಂ ನಿತೀಶ್ ಕುಮಾರ್!
ಚುನಾವಣಾ ಭಾಷಣಗಳಲ್ಲಿ ಮೋದಿ ಬಗ್ಗೆ ಹೊಗಳಿಕೆಯ ಸುರಿಮಳೆಗೈಯ್ಯುತ್ತಿರುವ ನಿತೀಶ್ ಕುಮಾರ್ ಪ್ರತಿ ಬಾರಿಯೂ ಮೋದಿ ಪಾಕಿಸ್ತಾನದ ಮೇಲೆ ನಡೆಸಿರುವ ಸರ್ಜಿಕಲ್ ಸ್ಟ್ರೈಕ್ ನ್ನು ಉಲ್ಲೇಖಿಸುತ್ತಿದ್ದಾರೆ.

Published On :
ಪಾಟ್ನಾ: 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಎಲ್ಲಾ ಅಭ್ಯರ್ಥಿಗಳಿಗೂ ಮೋದಿಯೇ ಫೇಸ್!
ಚುನಾವಣಾ ಕಣದಲ್ಲಿರುವ ಬಿಜೆಪಿಯ ಬಹುತೇಕ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತಯಾಚನೆ ಮಾಡುತ್ತಿದ್ದಾರೆ. ಇದೇನು ವಿಶೇಷವಲ್ಲ. ಅಚ್ಚರಿಯ ಸಂಗತಿ ಎಂದರೆ ಜೆಡಿಯು ನಾಯಕ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ಈಗ ಮೋದಿ ಹೆಸರಿನಲ್ಲಿ ಮತಯಾಚನೆ ಮಾಡಲು ಪ್ರಾರಂಭಿಸಿದ್ದಾರೆ.
ಚುನಾವಣಾ ಭಾಷಣಗಳಲ್ಲಿ ಮೋದಿ ಬಗ್ಗೆ ಹೊಗಳಿಕೆಯ ಸುರಿಮಳೆಗೈಯ್ಯುತ್ತಿರುವ ನಿತೀಶ್ ಕುಮಾರ್ ಪ್ರತಿ ಬಾರಿಯೂ ಮೋದಿ ಪಾಕಿಸ್ತಾನದ ಮೇಲೆ ನಡೆಸಿರುವ ಸರ್ಜಿಕಲ್ ಸ್ಟ್ರೈಕ್ ನ್ನು ಉಲ್ಲೇಖಿಸುತ್ತಿದ್ದಾರೆ.
"ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿ ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ" ಎಂದು ಪ್ರತಿ ಚುನಾವಣಾ ಭಾಷಣಗಳಲ್ಲೂ ನಿತೀಶ್ ಕುಮಾರ್ ಹೇಳುತ್ತಿದ್ದಾರೆ.
ಪ್ರಧಾನಿ ಮೋದಿ ಅವರ ಕೆಲಸಗಳನ್ನು ಕೊಂಡಾಡುತ್ತಿರುವ ನಿತೀಶ್ ಕುಮಾರ್ ಹೋದಲ್ಲೆಲ್ಲಾ ಮೋದಿ ಹೆಸರಿನಲ್ಲೆ ಮತಯಾಚಿಸುತ್ತಿದ್ದಾರೆ, ತಮ್ಮ ಹೆಸರಿನಲ್ಲಿ ಮತ ಯಾಚಿಸುತ್ತಿಲ್ಲ ಎಂದು ಪಾಟ್ನಾದ ರಾಜಕೀಯ ವಿಶ್ಲೇಷಕ ಅಮಿತ್ ಕುಮಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿನಿತೀಶ್ ಕುಮಾರ್Nitish KumarBiharಬಿಹಾರLok Sabha Elections 2019ಲೋಕಸಭಾ ಚುನಾವಣೆ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


