ರಾಜಕೀಯ ಪಕ್ಷಗಳ ದೊಂಬರಾಟಕ್ಕೆ ಬೇಸತ್ತು ಚುನಾವಣಾ ಪ್ರಚಾರಗಳನ್ನೇ ನಿಲ್ಲಿಸಿದ ಚುನಾವಣಾ ಆಯೋಗ
ಪಶ್ಚಿಮ ಬಂಗಾಳದ 9 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಾಳೆಯಿಂದ ಚುನಾವಣೆ ಮುಗಿಯುವವರೆಗೂ ಪ್ರಚಾರವನ್ನು ಚುನಾವಣಾ ಆಯೋಗ ರದ್ದುಗೊಳಿಸಿದೆ.

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರೋಡ್ ಶೋ ವೇಳೆಯಲ್ಲಿ ಹಿಂಸಾಚಾರ ಸಂಭವಿಸಿದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ 9 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಾಳೆಯಿಂದ ಚುನಾವಣೆ ಮುಗಿಯುವವರೆಗೂ ಪ್ರಚಾರವನ್ನು ಚುನಾವಣಾ ಆಯೋಗ ಸ್ಥಗಿತಗೊಳಿಸಿದೆ.
ದೂಮ್ ದೂಮ್, ಬರಾಸತ್, ಬಸಿರ್ಹಾಟ್, ಜಯ್ ನಗರ, ಮಥುರಾಪುರ, ಜಾಧವ್ ಪುರ್, ಡೈಮಂಡ್ ಹಾರ್ಬೂರ್, ಉತ್ತರ ಮತ್ತು ದಕ್ಷಿಣ ಕೊಲ್ಕತ್ತಾದಲ್ಲಿ ಚುನಾವಣಾ ಪ್ರಚಾರ ನಡೆಸಿದಂತೆ ಚುನಾವಣಾ ಆಯೋಗ ಕಠಿಣ ನಿರ್ಧಾರ ಕೈಗೊಂಡಿದೆ.
ಇದೇ ಮೊದಲ ಬಾರಿಗೆ ವಿಧಿ 324ನೇ ವಿಧಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ವಿದ್ಯಾಸಾಗರ್ ಪ್ರತಿಮೆ ಧ್ವಂಸಕ್ಕೆ ಚುನಾವಣಾ ಆಯೋಗ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಧ್ವಂಸಗೊಳಿಸಿದರನ್ನು ಆದಷ್ಟು ಬೇಗ ಬಂಧಿಸಲಾಗುವುದು ಎಂದು ಉಪ ಚುನಾವಣಾ ಆಯುಕ್ತರಾದ ಚಂದ್ರ ಭೂಷಣ್ ಕುಮಾರ್ ಹೇಳಿದ್ದಾರೆ
ಪಶ್ಚಿಮ ಬಂಗಾಳ ಸಿಇ ಒ ನಿರ್ದಶನದ ಮೇರೆಗೆ ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪದ ಹಿನ್ನೆಲೆಯಲ್ಲಿ ಎಡಿಜಿ ಸಿಐಡಿ ರಾಜೀವ್ ಕುಮಾರ್ ಹಾಗೂ ಪಶ್ಚಿಮ ಬಂಗಾಳದ ಗೃಹ ಮತ್ತು ಆರೋಗ್ಯ ವ್ಯವಹಾರಗಳ ಪ್ರಧಾನ ಕಾರ್ಯದರ್ಶಿಯನ್ನು ಕೂಡಲೇ ಜಾರಿಗೆ ಬರುವಂತೆ ಆ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


