ಜನರ ತೀರ್ಪು ಮಮತಾ ಬ್ಯಾನರ್ಜಿಯ ಅಧಿಕಾರದ ಮದವನ್ನು ಹೋಗಲಾಡಿಸಲಿದೆ- ಪ್ರಧಾನಿ ಮೋದಿ
ಮಮತಾ ಬ್ಯಾನರ್ಜಿ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಎಲ್ಲವನ್ನೂ ಹಾಳು ಮಾಡುತ್ತಿದೆ. ಜನರ ತೀರ್ಪು ಮತ್ತು ಧೈರ್ಯ ದಬ್ಬಾಳಿಕೆಯ ಆಡಳಿತವನ್ನು ಹೋಗಲಾಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಟಾಕಿ: ಮಮತಾ ಬ್ಯಾನರ್ಜಿ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಎಲ್ಲವನ್ನೂ ಹಾಳು ಮಾಡುತ್ತಿದೆ. ಜನರ ತೀರ್ಪು ಮತ್ತು ಧೈರ್ಯ ದಬ್ಬಾಳಿಕೆಯ ಆಡಳಿತವನ್ನು ಹೋಗಲಾಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಉತ್ತರ 24 ಪರಗಣ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರೋಡ್ ಶೋ ವೇಳೆಯಲ್ಲಿ ಟಿಎಂಸಿ ಗೂಂಡಾಗಳ ದಾಳಿಯನ್ನು ಇಡೀ ದೇಶ ಟಿವಿ ಮೂಲಕ ನೋಡಿದೆ.ಪಶ್ಚಿಮ ಬಂಗಾಳದಲ್ಲಿನ ಚುನಾವಣಾ ಫಲಿತಾಂಶಕ್ಕಾಗಿ ಕುತೂಹಲದಿಂದ ಕಾಯುತ್ತಿದ ಎಂದರು.
ಬಿಜೆಪಿ ವಿರುದ್ಧ ಸೇಡು ತೀರಿಸಿಕೊಳ್ಳುವ ಸಲುವಾಗಿ ಅಮಿತ್ ಶಾ ರೋಡ್ ವೇಳೆಯಲ್ಲಿ ಟಿಎಂಸಿ ದಾಳಿ ನಡೆಸಿದೆ.ಮಮತಾ ಬ್ಯಾನರ್ಜಿಗೂಂಡಾಗಳು ಗನ್ ಗಳು ಹಾಗೂ ಬಾಂಬ್ ಗಳನ್ನು ಹೊಂದುವ ಮೂಲಕ ದಾಳಿ ನಡೆಸಿದ್ದಾರೆ. ಆಕೆಯ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಎಲ್ಲವನ್ನೂ ಹಾಳು ಮಾಡಿದೆ ಎಂದು ಆರೋಪಿಸಿದರು.
ಮಮತಾ ಬ್ಯಾನರ್ಜಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವುದರಿಂದ ಇಲ್ಲಿಯ ಜನರು ಗೌರವಿಸುತ್ತಿದ್ದಾರೆ. ಆದರೆ, ಅಧಿಕಾರದ ಮದವನ್ನೇರಿಸಿಕೊಂಡಿರುವ ಮಮತಾ ಬ್ಯಾನರ್ಜಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡ ಮೇಲು ಮಾಡುತ್ತಿದ್ದಾರೆ ಎಂದು ಆರೋಪಿಸಿದರು .
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


