ಪ್ರಚಾರ ಅವಧಿ ಕಡಿತ: ಬಿಜೆಪಿಗೆ ಆಯೋಗದ ಗಿಫ್ಟ್, ದೀದಿ ಆಕ್ರೋಶ
ಪ್ರಚಾರದ ಅವಧಿಯನ್ನು 1 ದಿನ ಕಡಿತಗೊಳಿಸಿದ ಚುನಾವಣಾ ಆಯೋಗದ ಕ್ರಮವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು...

Published On :
ಕೋಲ್ಕತಾ: ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವಿನ ಘರ್ಷಣೆ, ಹಿಂಸಾಚಾರ ತಾರಕಕ್ಕೇರಿದ ಬೆನ್ನಲ್ಲೇ ಪ್ರಚಾರದ ಅವಧಿಯನ್ನು 1 ದಿನ ಕಡಿತಗೊಳಿಸಿದ ಚುನಾವಣಾ ಆಯೋಗದ ಕ್ರಮವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಖಂಡಿಸಿದ್ದು, ಇದು ಬಿಜೆಪಿಗೆ ಆಯೋಗದ ಗಿಫ್ಟ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಕೋಲ್ಕತ್ತಾದಲ್ಲಿ ಮಂಗಳವಾರ ರೋಡ್ ಷೋ ನಡೆಸಿದ್ದರು. ಆ ಸಂದರ್ಭದಲ್ಲಿ ನಡೆದ ಗಲಭೆಯಲ್ಲಿ ಹಲವರು ಗಾಯಗೊಂಡಿದ್ದರು. ಕೋಲ್ಕತ್ತದಲ್ಲಿ ಶಾ ಅವರ ರೋಡ್ ಷೋ ಸಂದರ್ಭದಲ್ಲಿ ಕಲ್ಲು ತೂರಾಟ ಹಾಗೂ ಆ ನಂತರ ಗಲಭೆ ನಡೆದು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಸಮಾಜ ಸುಧಾರಕ ಈಶ್ವರಚಂದ್ರ ವಿದ್ಯಾಸಾಗರರ ಪುತ್ಥಳಿಯನ್ನೂ ಧ್ವಂಸಗೊಳಿಸಲಾಗಿತ್ತು.
ಇದೇ ಕಾರಣಕ್ಕೆ ಆಯೋಗವು ತನ್ನ ಸಾಂವಿಧಾನಿಕ ವಿಶೇಷ ಹಕ್ಕನ್ನು ಪ್ರಯೋಗಿಸಿ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಸಾಮಾನ್ಯವಾಗಿ ಮತದಾನಕ್ಕೆ 48 ಗಂಟೆ ಇರುವಂತೆ ಬಹಿರಂಗ ಪ್ರಚಾರ ಅಂತ್ಯಗೊಳ್ಳುತ್ತದೆ. ಅದರ ಪ್ರಕಾರ ಈ 9 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಶುಕ್ರವಾರ ಸಂಜೆ ಅಂತ್ಯವಾಗಬೇಕಿತ್ತು. ಆದರೆ ಗಲಭೆ ಸಂಭವಿಸಿದ ಕಾರಣಕ್ಕೆ ಗುರುವಾರ (ಮೇ 16) ರಾತ್ರಿ 10 ಗಂಟೆಯ ನಂತರ ಬಹಿರಂಗ ಪ್ರಚಾರ ನಡೆಸಬಾರದು ಎಂದು ಆಯೋಗ ಸೂಚಿಸಿದೆ.
ಚುನಾವಣಾ ಆಯೋಗದ ಈ ಕ್ರಮವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಂಡಿಸಿದ್ದು, ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆ ಇಲ್ಲವೇ ಇಲ್ಲ. ಹಾಗಿದ್ದರೂ 324ನೇ ವಿಧಿಯ ಅನ್ವಯ ಆಯೋಗ ಕ್ರಮ ಕೈಗೊಂಡಿದೆ. ಆಯೋಗದ ಈ ಕ್ರಮ ಅಸಾಂವಿಧಾನಿಕ ಮತ್ತು ಅನೈತಿಕ. ಕೇವಲ ಬಿಜೆಪಿಗೆ ಅನುಕೂಲ ಮಾಡಿಕೊಡುವ ಕಾರಣದಿಂದಲೇ ಆಯೋಗ ಈ ಕ್ರಮ ಕೈಗೊಂಡಿದೆ. ಇದು ಬಿಜೆಪಿಗೆ ಆಯೋಗ ನೀಡಿರುವ ಉಡುಗೊರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿಪಶ್ಚಿಮ ಬಂಗಾಳWest BengalMamata Banerjeeಮಮತಾ ಬ್ಯಾನರ್ಜಿElection Commissionಚುನಾವಣಾ ಆಯೋಗTMCಟಿಎಂಸಿಲೋಕಸಭಾ ಚುನಾವಣೆ 2019Loksabha Election 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


