ಮೇ 23 ರಂದು ಮೋದಿ ಬೈ ಬೈ- ರಾಹುಲ್ ಗಾಂಧಿ
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿಷಯಗಳನ್ನು ಮಾತನಾಡದೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ವಹಿಸಿದ್ದಾರೆ. ಆದರೆ, ಮೇ 23 ರಂದು ಬೈ ಬೈ ಹೇಳಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿಷಯಗಳನ್ನು ಮಾತನಾಡದೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ವಹಿಸಿದ್ದಾರೆ. ಆದರೆ, ಅವರನ್ನು ತಪ್ಪಿಸಿಕೊಳ್ಳಲು ನಾವು ಬಿಡುವುದಿಲ್ಲ ಮೇ 23 ರಂದು ಮೋದಿ ಬೈ ಬೈ ಹೇಳಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಪಾಟಲಿಪುತ್ರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೋದಿ ನೀಡಿದ್ದ ಎಲ್ಲಾ ಬಡವರ ಖಾತೆಗಳಿಗೆ 15 ಲಕ್ಷ ಹಣ ಹಾಗೂ ಎರಡು ಕೋಟಿ ಉದ್ಯೋಗ ಸೃಷ್ಟಿ ಭರವಸೆಗಳು ಏನಾದವೂ ಎಂದು ಪ್ರಶ್ನಿಸಿದರು.
ಐದು ವರ್ಷಗಳ ಅಧಿಕಾರವಧಿಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿರುವ ಮೋದಿ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಮೇ 23 ರಂದು ನಡೆಯಲಿರುವ ಮತ ಎಣಿಕೆ ಸಂದರ್ಭದಲ್ಲಿ ಜನರು ಉತ್ತರ ನೀಡಲಿದ್ದಾರೆ ಎಂದರು.
ಮೋದಿ ಅವರ ಸುಳ್ಳುಗಳು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದುಕೊಂಡಿವೆ. ವೆಬ್ ಸೈಟ್ ವೊಂದರಲ್ಲಿ ಮೋದಿಯ ಸುಳ್ಳುಗಳ ಕೈಪಿಡಿಯನ್ನು ಪ್ರಕಟಿಸಲಾಗಿದೆ . ರಾಫೆಲ್ ಒಪ್ಪಂದ ಸೇರಿದಂತೆ ಅನೇಕ ವಿಷಯಗಳಲ್ಲಿ ಮೋದಿ ಸುಳ್ಳುಗಳನ್ನು ಹೇಳಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


