ಯುಪಿಎ-3 ರಚನೆ?: ಪ್ರಮುಖ ಪ್ರತಿಪಕ್ಷಗಳ ಸಭೆಗೆ ಸೋನಿಯಾ ಗಾಂಧಿ ತಯಾರಿ!
ಮುಂದಿನ ವಾರ ಈ ವೇಳೆಗೆ ಚುನಾವಣೆಯ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಿರಲಿದೆ. ಅಷ್ಟರಲ್ಲೆ ಕೇಂದ್ರದಲ್ಲಿ ಅಧಿಕಾರದ ಸೂತ್ರ ಹಿಡಿಯಲು...

Published On :
ನವದೆಹಲಿ: ಮುಂದಿನ ವಾರ ಈ ವೇಳೆಗೆ ಚುನಾವಣೆಯ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಿರಲಿದೆ. ಅಷ್ಟರಲ್ಲೆ ಕೇಂದ್ರದಲ್ಲಿ ಅಧಿಕಾರದ ಸೂತ್ರ ಹಿಡಿಯಲು ವಿಪಕ್ಷಗಳು ಈಗಾಗಲೇ ರಾಜಕೀಯ ಲೆಕ್ಕಾಚಾರದಲ್ಲಿ ಮುಳುಗಿವೆ.
ಮೆ.23 ರಂದು ಪ್ರಕಟಗೊಳ್ಳುವ ಫಲಿತಾಂಶದ ನಂತರ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ನವದೆಹಲಿಯಲ್ಲಿ ವಿಪಕ್ಷಗಳ ಸಭೆಯನ್ನು ಕರೆದಿದ್ದಾರೆ.
ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನ ಬಂದಿರುವುದನ್ನು ಸ್ಪಷ್ಟಪಡಿಸಿರುವ ಡಿಎಂಕೆ, ತನ್ನ ನಾಯಕ ಎಂಕೆ ಸ್ಟ್ಯಾಲಿನ್ ಆಹ್ವಾನವನ್ನು ಸ್ವೀಕರಿಸಿದ್ದಾರೆಂದು ಹೇಳಿದೆ.
ಚುನಾವಣಾ ಪ್ರಚಾರದಿಂದ ಅಂತರ ಕಾಯ್ದುಕೊಂಡಿರುವ ಸೋನಿಯಾ ಗಾಂಧಿ, ಜೆಡಿಎಸ್, ಎನ್ ಸಿಪಿ, ಎಸ್ ಪಿ, ಬಿಎಸ್ ಪಿ ಪಕ್ಷಗಳ ನಾಯಕರಿಗೂ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ.
ಇದೇ ವೇಳೆ ಟಿಆರ್ ಎಸ್ ನ ನಾಯಕ ಕೆ.ಚಂದ್ರಶೇಖರ್ ರಾವ್, ಬಿಜು ಜನತಾದಳದ ನವೀನ್ ಪಟ್ನಾಯಕ್, ವೈಎಸ್ಆರ್ ಕಾಂಗ್ರೆಸ್ ನ ಜಗನ್ ಮೋಹನ್ ರೆಡ್ಡಿ ಅವರನ್ನೂ ಸಭೆಗೆ ಆಹ್ವಾನಿಸಿರುವುದು ಬಹಿರಂಗವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿSonia Gandhiಸೋನಿಯಾ ಗಾಂಧಿresultಫಲಿತಾಂಶLok Sabha Elections 2019ಲೋಕಸಭಾ ಚುನಾವಣೆ 2019UPA-3ಯುಪಿಎ-3
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


