ದೇಶ

ಗೋಡ್ಸೆ 'ದೇಶಭಕ್ತ' ಎಂದಿದ್ದ ಪ್ರಗ್ಯಾ ಠಾಕೂರ್ ಕ್ಷಮೆಯಾಚನೆ

ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.

ಗೋಡ್ಸೆ 'ದೇಶಭಕ್ತ' ಎಂದಿದ್ದ  ಪ್ರಗ್ಯಾ ಠಾಕೂರ್ ಕ್ಷಮೆಯಾಚನೆ
ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್
Published On :
ಭೋಪಾಲ್: ರಾಷ್ಟ್ರಪಿತ ಮಹಾತ್ಮಾ ಗಾಂಧಿಯ ಹಂತಕ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.
ದೇಶಕ್ಕಾಗಿ ಮಹಾತ್ಮ ಗಾಂಧಿ ಮಾಡಿರುವ ಕೆಲಸಗಳನ್ನು ಮರೆಯಲು ಸಾಧ್ಯವಿಲ್ಲ, ಅವರನ್ನು ಗೌರವಿಸುವುದಾಗಿ ಹೇಳಿದ್ದಾರೆ.
ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು, ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ವಿಚಾರವಾಗಿ  ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಗ್ಯಾ ಸಿಂಗ್, ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ಗೋಡ್ಸೆ ಬದುಕಿದ್ದರೆ ಅವರಿಗೂ ಬಿಜೆಪಿ ಟಿಕೆಟ್ ನೀಡುತಿತ್ತು ಎಂದು ಹೇಳಿದ್ದರು. ಈ ವಿಚಾರವಾಗಿ ಅನೇಕರು ಅಸಮಾಧಾನ ಹೊರ ಹಾಕಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.