ನೀತಿ ಸಂಹಿತೆ ನಿರ್ವಹಣೆ: ಚುನಾವಣಾ ಆಯೋಗದಲ್ಲಿ ಬಿರುಕು?: ಈ ಬಗ್ಗೆ ಮುಖ್ಯ ಚುನಾವಣಾ ಆಯುಕ್ತರು ಹೇಳಿದ್ದಿಷ್ಟು!
ಚುನಾವಣಾ ನೀತಿ ಸಂಹಿತೆ ನಿರ್ವಹಣೆ ವಿಚಾರವಾಗಿ ಚುನಾವಣಾ ಆಯೋಗದಲ್ಲಿ ಆಂತರಿಕ ಕಲಹ ಉಂಟಾಗಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಸ್ಪಷ್ಟಪಡಿಸಿದ್ದಾರೆ.

Published On :
ನವದೆಹಲಿ: ಚುನಾವಣಾ ನೀತಿ ಸಂಹಿತೆ ನಿರ್ವಹಣೆ ವಿಚಾರವಾಗಿ ಚುನಾವಣಾ ಆಯೋಗದಲ್ಲಿ ಆಂತರಿಕ ಕಲಹ ಉಂಟಾಗಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಸ್ಪಷ್ಟಪಡಿಸಿದ್ದಾರೆ.
ಚುನಾವಣಾ ಆಯೋಗದ ಮೂವರು ಸದಸ್ಯರು ಒಂದೇ ರೀತಿ ಇರುವುದಕ್ಕೆ ಸಾಧ್ಯವಿಲ್ಲ ಎಂದು ಇದೇ ವೇಳೆ ಸುನಿಲ್ ಅರೋರಾ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರ ಭಾಷಣಗಳ ವಿರುದ್ಧ ದಾಖಲಾಗಿದ್ದ ಉಲ್ಲಂಘನೆಯ ದೂರುಗಳಿಗೆ ಆಯೋಗ ಹಲವು ಬಾರಿ ಕ್ಲೀನ್ ಚಿಟ್ ನೀಡಿತ್ತು. ಇದಕ್ಕೆ ಅಶೋಕ್ ಲಾವಸ ವಿರೋಧ ವ್ಯಕ್ತಪಡಿಸಿದ್ದರೂ ಅದನ್ನು ಪರಿಗಣಿಸಲಾಗಿರಲಿಲ್ಲ.
ಈ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ವಿಷಯವಾಗಿ ನಿರ್ಧರಿಸುವುದಕ್ಕೆ ಆಯೋಗದ ಪೂರ್ಣಪ್ರಮಾಣದ ಸಭೆಗಳಲ್ಲಿ ಭಾಗವಹಿಸುವುದರಿಂದ ದೂರ ಉಳಿಯುವುದಾಗಿ ಚುನಾವಣಾ ಆಯುಕ್ತ ಅಶೋಕ್ ಲವಾಸ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ನಿರ್ವಹಣೆಯ ವಿಷಯವಾಗಿ ಚುನಾವಣಾ ಆಯೋಗದಲ್ಲಿ ಬಿರುಕು ಮೂಡಿದೆ ಎಂಬ ವರದಿ ಪ್ರಕಟವಾಗಿತ್ತು.
ತಮ್ಮ ನಿರ್ಧಾರಗಳನ್ನೂ ಆಯೋಗದ ಆದೇಶಗಳಲ್ಲಿ ಸೇರಿಸುವುದಾದರೆ ಮಾತ್ರ ಸಭೆಗೆ ಹಾಜರಾಗುವುದಾಗಿ ಅಶೋಕ್ ಲವಾಸ ಆಯುಕ್ತರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Election Commissionಚುನಾವಣಾ ಆಯುಕ್ತನೀತಿ ಸಂಹಿತೆ ಉಲ್ಲಂಘನೆಅಶೋಕ್ ಲವಾಸcecLok Sabha Elections 2019ಲೋಕಸಭಾ ಚುನಾವಣೆ 2019code violation casesAshok Lavasa letter
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


