ಭದ್ರತಾ ಸಿಬ್ಬಂದಿ ಇಂದಿರಾ ಗಾಂಧಿ ರೀತಿ ನನ್ನನ್ನೂ ಹತ್ಯೆ ಮಾಡಬಹುದು: ಕೇಜ್ರಿವಾಲ್
ಬಿಜೆಪಿ ನನ್ನನ್ನು ಕೊಲೆ ಮಾಡಲು ಷಡ್ಯಂತ್ರ ರೂಪಿಸಿದ್ದು, ನನ್ನ ಭದ್ರತಾ ಸಿಬ್ಬಂದಿಯೇ ಒಂದು ದಿನ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು....

Published On :
ನವದೆಹಲಿ: ಬಿಜೆಪಿ ನನ್ನನ್ನು ಕೊಲೆ ಮಾಡಲು ಷಡ್ಯಂತ್ರ ರೂಪಿಸಿದ್ದು, ನನ್ನ ಭದ್ರತಾ ಸಿಬ್ಬಂದಿಯೇ ಒಂದು ದಿನ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಹತ್ಯೆ ರೀತಿಯಲ್ಲಿ ನನ್ನನ್ನು ಹತ್ಯೆ ಮಾಡುವ ಸಾಧ್ಯತೆ ಇದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ತಮ್ಮನ್ನು ಕೊಲ್ಲಲು ಬಯಸಿದ್ದು, ಭದ್ರತಾ ಸಿಬ್ಬಂದಿಯಿಂದಲೇ ತಮ್ಮ ಹತ್ಯೆಯಾಗುವ ಸಾಧ್ಯತೆ ಇದೆ ಎಂದು ಕೇಜ್ರಿವಾಲ್ ಅವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ತಮ್ಮ ಭದ್ರತೆಗೆ ನಿಯೋಜನೆಗೊಂಡಿರುವ ಸಿಬ್ಬಂದಿ ಬಿಜೆಪಿಗೆ ವರದಿ ಸಲ್ಲಿಸುತ್ತಿದ್ದು, ಅವರಿಂದಲೇ ತಮ್ಮ ಹತ್ಯೆಯ ಸಂಚು ರೂಪಿಸುವ ಸಾಧ್ಯತೆ ಇದೆ ಎಂದು ಕೇಜ್ರಿವಾಲ್ ದೂರಿದ್ದಾರೆ.
ಇತ್ತೀಚಿಗೆ ದೆಹಲಿಯ ಮೋತಿನಗರದಲ್ಲಿ ರೋಡ್ ಶೋ ವೇಳೆ ಕೇಜ್ರಿವಾಲ್ ಗೆ ಯುವಕನೋರ್ವ ಕಪಾಳಮೋಕ್ಷ ಮಾಡಿದ್ದು, ಇದಕ್ಕೆ ಬಿಜೆಪಿಯೇ ಕಾರಣ ಎಂದು ದೆಹಲಿ ಸಿಎಂ ಆರೋಪಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


