ದೇಶ

ಕೇದಾರನಾಥ ದೇಗುಲದಲ್ಲಿ ಪ್ರಧಾನಿ ಮೋದಿ, ಸೋಮನಾಥದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪೂಜೆ ಸಲ್ಲಿಕೆ

ದೇಶಾದ್ಯಂತ ಭರ್ಜರಿ ಪ್ರಚಾರ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಕೇದಾರನಾಥ ದೇಗುಲದಲ್ಲಿ ಪ್ರಧಾನಿ ಮೋದಿ, ಸೋಮನಾಥದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪೂಜೆ ಸಲ್ಲಿಕೆ
ಕೇದಾರನಾಥ ದೇಗುಲದಲ್ಲಿ ಪ್ರಧಾನಿ ಮೋದಿ, ಸೋಮನಾಥದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪೂಜೆ ಸಲ್ಲಿಕೆ
Published On :
ಉತ್ತರಾಖಂಡ್/ ಗುಜರಾತ್: 2019 ರ ಲೋಕಸಭಾ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಕೊನೆಯ ಹಂತದ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇದೆ. ಈ ನಡುವೆ ದೇಶಾದ್ಯಂತ ಭರ್ಜರಿ ಪ್ರಚಾರ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ  ಅಧ್ಯಕ್ಷ ಅಮಿತ್ ಶಾ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ ನಲ್ಲಿರುವ ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದರೆ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಗುಜರಾತ್ ನಲ್ಲಿರುವ ಸೋಮನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಕೇದಾರನಾಥದಲ್ಲಿ ಪೂಜೆ ಸಲ್ಲಿಸಿದ ಬಳಿಕ ಬದ್ರಿನಾಥ್ ಗೂ ತೆರಳಿ ಪೂಜೆ ಸಲ್ಲಿಸಿದ್ದಾರೆ.  ಮೇ.19 ರಂದು ವಾರಾಣಸಿಯೂ ಸೇರಿದಂತೆ ಒಟ್ಟಾರೆ 59 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.