ತೇಜ್ ಪ್ರತಾಪ್ ಭದ್ರತಾ ಸಿಬ್ಬಂದಿಯಿಂದ ಮಾಧ್ಯಮ ವ್ಯಕ್ತಿ ಮೇಲೆ ಹಲ್ಲೆ
ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಅವರ ಖಾಸಗಿ ಭದ್ರತಾ ಸಿಬ್ಬಂದಿ ಕ್ಯಾಮರಾಮನ್ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ನಡೆದಿದೆ.

Published On :
ಪಾಟ್ನಾ: ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಅವರ ಖಾಸಗಿ ಭದ್ರತಾ ಸಿಬ್ಬಂದಿ ಕ್ಯಾಮರಾಮನ್ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ನಡೆದಿದೆ.
ತೇಜ್ ಪ್ರತಾಪ್ ಯಾದವ್ ಅವರನ್ನು ಮತಗಟ್ಟೆ ಬಳಿ ಚಿತ್ರೀಕರಿಸಲು ಮುಂದಾದಾಗ ಈ ಘಟನೆ ನಡೆದಿದೆ. ಇಡೀ ಘಟನೆ ಹಿಂದೆ ನನನ್ನು ಹತ್ಯೆ ಮಾಡುವ ಸಂಚಿದೆ ಎಂದು ತೇಜ್ ಪ್ರತಾಪ್ ಆರೋಪಿಸಿದ್ದಾರೆ.
ಯಾದವ್ ಕಾರಿನ ಗಾಜು ಹೊಡೆದಿರುವ ಆರೋಪದ ಮೇರೆಗೆ ಯಾದವ್ ಭದ್ರತಾ ಸಿಬ್ಬಂದಿ ಕ್ಯಾಮರಾಮನ್ ನನ್ನು ಥಳಿಸಿದ್ದಾನೆ. ತೇಜ್ ಪ್ರತಾಪ್ ಯಾದವ್ ಮತ ಚಲಾಯಿಸಿ ಮತಗಟ್ಟೆಯಿಂದ ಹೊರ ಬಂದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


