ಚುನಾವಣೋತ್ತರ ಸಮೀಕ್ಷೆ: ಪ್ರಧಾನಿ ಮೋದಿ, ಬಿಜೆಪಿಗೆ ಮಾಲ್ಡೀವ್ಸ್ ಮಾಜಿ ಅಧ್ಯಕ್ಷರ ಶುಭಾಶಯ ಟ್ವೀಟ್!
ಲೋಕಸಭೆ ಚುನಾವಣೋತ್ತರ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ ಬಹುಮತ ಬರುತ್ತದೆ ಎಂದು ಭವಿಷ್ಯ ನುಡಿದಿದ್ದು ಇದರ ಬೆನ್ನಲ್ಲೇ ಮಾಲ್ಡೀವ್ಸ್ ಮಾಜಿ ಅಧ್ಯಕ್ಷ ಮೊಹಮ್ಮದ್...

Published On :
ನವದೆಹಲಿ: ಲೋಕಸಭೆ ಚುನಾವಣೋತ್ತರ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ ಬಹುಮತ ಬರುತ್ತದೆ ಎಂದು ಭವಿಷ್ಯ ನುಡಿದಿದ್ದು ಇದರ ಬೆನ್ನಲ್ಲೇ ಮಾಲ್ಡೀವ್ಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ನಶೀದ್ ಅಡ್ವಾನ್ಸ್ ಆಗಿ ಪ್ರಧಾನಿ ಮೋದಿಗೆ ಶುಭಾಶಯ ತಿಳಿಸಿದ್ದಾರೆ.
ಮೊಹಮ್ಮದ್ ನಶೀದ್ ತಮ್ಮ ಟ್ವೀಟ್ ನಲ್ಲಿ ಪ್ರಧಾನಿ ಮೋದಿ ಹಾಗೂ ಬಿಜೆಪಿಗೆ ಶುಭಾಶಯಗಳು. ಮಾಲ್ಡೀವ್ಸ್ ದೇಶ ಭಾರತದ ಜೊತೆಗೆ ಉತ್ತಮ ಬಾಂಧವ್ಯವನ್ನು ಮುಂದುವರೆಸಲು ಇಚ್ಛಿಸುತ್ತದೆ ಎಂದು ಟ್ವೀಟಿಸಿದ್ದಾರೆ.
ಸತತ ಎರಡು ತಿಂಗಳ ಕಾಲ 7 ಹಂತಗಳಲ್ಲಿ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು ಇದರ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳನ್ನು ಸುದ್ದಿ ಮಾಧ್ಯಮಗಳು ಪ್ರಸಾರ ಮಾಡಿದ್ದವು.
ಹೆಚ್ಚಿನ ಸಮೀಕ್ಷೆಗಳಲ್ಲಿ ಪ್ರಧಾನಿ ನೇತೃತ್ವದ ಎನ್ಡಿಎಗೆ ಬಹುಮತ ಬರಲಿದೆ ಎಂದು ಭವಿಷ್ಯ ನುಡಿದಿದ್ದವು. ಈ ಸಮೀಕ್ಷೆಗಳು ಇದೀಗ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಮೇ 23ರಂದು ಎಲ್ಲಾ ಪಕ್ಷಗಳ ಗೆಲುವು ಸೋಲು ತಿಳಿಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿbjpಬಿಜೆಪಿMaldivesಮಾಲ್ಡೀವ್ಸ್ಚುನಾವಣೋತ್ತರ ಸಮೀಕ್ಷೆಮೊಹಮ್ಮದ್ ನಶೀದ್Mohamed NasheedExit Poll Results
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


