ದೇಶ

ಎಕ್ಸಿಟ್ ಪೋಲ್ ಅಂತಿಮ ಅಲ್ಲ: ಆದ್ರೆ ಬಿಜೆಪಿ ಗೆಲುವಿನ ಸುಳಿವು ನೀಡಿವೆ: ನಿತಿನ್ ಗಡ್ಕರಿ

ಚುನಾವಣೋತ್ತರ ಸಮೀಕ್ಷೆಗಳೇ ಅಂತಿಮ ಅಲ್ಲ. ಆದರೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಸುಳಿವೆ ನೀಡಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು....

ಎಕ್ಸಿಟ್ ಪೋಲ್ ಅಂತಿಮ ಅಲ್ಲ: ಆದ್ರೆ ಬಿಜೆಪಿ ಗೆಲುವಿನ ಸುಳಿವು ನೀಡಿವೆ: ನಿತಿನ್ ಗಡ್ಕರಿ
ನಿತಿನ್ ಗಡ್ಕರಿ
Published On :
ನಾಗ್ಪುರ್: ಚುನಾವಣೋತ್ತರ ಸಮೀಕ್ಷೆಗಳೇ ಅಂತಿಮ ಅಲ್ಲ. ಆದರೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಸುಳಿವೆ ನೀಡಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ಹೇಳಿದ್ದಾರೆ.
ಈ ವಾರ ಬಿಡುಗಡೆಯಾಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಆಧಾರಿತ ಚಿತ್ರ 'ಪಿಎಂ ನರೇಂದ್ರ ಮೋದಿ' ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ಚುನಾವಣೋತ್ತರ ಸಮೀಕ್ಷೆಗಳೇ ಅಂತಿಮ ಫಲಿತಾಂಶ ಅಲ್ಲ. ಎನ್ ಡಿಎ ಸರ್ಕಾರ ಮಾಡಿದ ಅಭಿವೃದ್ಧಿ ಕೆಲಸಗಳಿಂದಾಗಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಸುಳಿವು ನೀಡಿವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.
ಇದೇ ವೇಳೆ ತಾವು ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ ಗಡ್ಕರಿ, ಈ ಕುರಿತು ನಾನು ಈಗಾಗಲೇ 20ರಿಂದ 50 ಬಾರಿ ಸ್ಪಷ್ಟನೆ ನೀಡಿದ್ದೇನೆ. ನಾವು ಮೋದಿಜೀ ನೇತೃತ್ವದಲ್ಲೇ ಚುನಾವಣೆ ಎದುರಿಸಿದ್ದು, ಮತ್ತೆ ಅವರೇ ಪ್ರಧಾನಿಯಾಗಲಿದ್ದಾರೆ ಎಂದರು.
ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ನೇತೃತ್ವದಲ್ಲಿ ಎನ್ ಡಿಎ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.