'ಫಿರ್ ಏಕ್ ಬಾರ್ ಮೋದಿ ಸರ್ಕಾರ್'; ಬಹುತೇಕ ಎಲ್ಲ ಸಮೀಕ್ಷೆಗಳಲ್ಲಿ ಬಿಜೆಪಿ ಮೇಲುಗೈ!
ಹಾಲಿ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಮುಕ್ತಾಯದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಕೂಡ ಪ್ರಕಟವಾಗಿದ್ದು, ಬಹುತೇಕ ಎಲ್ಲ ಸಮೀಕ್ಷೆಗಳಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ.

Published On :
ನವದೆಹಲಿ: ಹಾಲಿ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಮುಕ್ತಾಯದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಕೂಡ ಪ್ರಕಟವಾಗಿದ್ದು, ಬಹುತೇಕ ಎಲ್ಲ ಸಮೀಕ್ಷೆಗಳಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ.
ಚಾಣಕ್ಯ, ಸಿ-ವೋಟರ್ ಸೇರಿದಂತೆ 10ಕ್ಕೂ ಹೆಚ್ಚು ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಗೊಳಿಸಿದ್ದು, ಬಹುತೇಕ ಎಲ್ಲ ಸಮೀಕ್ಷೆಗಳಲ್ಲೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಮತ್ತೆ ಅಧಿಕಾರದತ್ತ ದಾಪುಗಾಲಿರಿಸುವ ಸಾಧ್ಯತೆ ಎಂದು ಹೇಳಲಾಗಿದೆ.
ಈ ಹಿಂದೆ ಚುನಾವಣೆ ಘೋಷಣೆಯಾದ ಬಳಿಕ ಅಬ್ಬರ ಪ್ರಚಾರದ ನಡೆಸಿದ್ದ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಅಧಿಕಾರದ ಕನಸು ಕಾಣುತ್ತಿವೆ. ಆದರೆ ಪ್ರಸ್ತುತ ಪ್ರಕಟಗೊಂಡಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರುವ ಸಾಧ್ಯತೆ ಕುರಿತು ಮಾಹಿತಿ ನೀಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


