ಲೋಕಸಭಾ ಚುನಾವಣೆ ವೇಳೆಯಲ್ಲಿ ಸುಮಾರು 3,500 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್ ವಶ
ಹದಿನೇಳನೆ ಲೋಕಸಭೆಗೆ ಚುನಾವಣೆ ಘೋಷಣೆಯಾದ ಮಾರ್ಚ್ 10ರಿಂದ ಈವರೆಗೂ ಸುಮಾರು 3449.12 ಕೋಟಿ ಮೊತ್ತದ ನಗದು, ಮದ್ಯ ಹಾಗೂ ಡ್ರಗ್ಸ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ನವದೆಹಲಿ: ಹದಿನೇಳನೆ ಲೋಕಸಭೆಗೆ ಚುನಾವಣೆ ಘೋಷಣೆಯಾದ ಮಾರ್ಚ್ 10ರಿಂದ ಈವರೆಗೂ ಸುಮಾರು 3449.12 ಕೋಟಿ ಮೊತ್ತದ ನಗದು, ಮದ್ಯ ಹಾಗೂ ಡ್ರಗ್ಸ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಇದು ಮೂರು ಪಟ್ಟು ಹೆಚ್ಚಾಗಿದೆ. 2014ರ ಲೋಕಸಭಾ ಚುನಾವಣೆ ವೇಳೆಯಲ್ಲಿ ಒಟ್ಟಾರೇ 1206 ಕೋಟಿ ಮೊತ್ತದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಚುನಾವಣಾ ವೆಚ್ಚದ ಮಹಾನಿರ್ದೇಶಕ ದಿಲೀಪ್ ಶರ್ಮಾ ಹೇಳಿದ್ದಾರೆ.
ಮೇ 10 ಮತ್ತು ಮೇ 19ರ ನಡುವಿನ ಅವಧಿಯಲ್ಲಿ 839. 03 ಕೋಟಿ ನಗದು, 294.41 ಕೋಟಿ ಮೊತ್ತದ ಮದ್ಯ , 1270.37 ಕೋಟಿ ಮೊತ್ತದ ಡ್ರಗ್ಸ್ , 986.76 ಕೋಟಿ ಮೊತ್ತದ ಚಿನ್ನಾಭರಣ, ಹಾಗೂ 58.56 ಕೋಟಿ ಮೊತ್ತದ ಸೀರೆ, ವಾಚ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


