ಇಂದು ರಾತ್ರಿ ದೇವೇಗೌಡ, ಕುಮಾರಸ್ವಾಮಿಯನ್ನು ಭೇಟಿಮಾಡಲಿದ್ದಾರೆ ಚಂದ್ರಬಾಬು ನಾಯ್ಡು
ಟಿಡಿಪಿ ಮುಖ್ಯಸ್ಥ ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್...

Published On :
ಬೆಂಗಳೂರು: ಟಿಡಿಪಿ ಮುಖ್ಯಸ್ಥ ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದ್ದಾರೆ.
ಇಂದು ಮಧ್ಯಾಹ್ನ ದೆಹಲಿಯಲ್ಲಿ ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸಿದ್ದ ಚಂದ್ರಬಾಬು ನಾಯ್ಡು ಅವರು ಈಗ ಬೆಂಗಳೂರಿಗೆ ಆಗಮಿಸಿ, ದೇವೇಗೌಡ ಹಾಗೂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡುತ್ತಿದ್ದಾರೆ.
ದೆಹಲಿಯಲ್ಲಿ ನಡೆದ ಪ್ರತಿಪಕ್ಷಗಳ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಕುಮಾರಸ್ವಾಮಿ ಭಾಗವಹಿಸಬೇಕಿತ್ತು. ಆದರೆ ಈ ಇಬ್ಬರು ನಾಯಕರು ಕೊನೆಗಳಿಯಲ್ಲಿ ದೆಹಲಿ ಪ್ರವಾಸ ರದ್ದು ಮಾಡಿದ್ದರು. ಹೀಗಾಗಿ ಚಂದ್ರಬಾಬು ನಾಯ್ಡು ಅವರು ದೇವೇಗೌಡರನ್ನು ಭೇಟಿ ಮಾಡಲು ಇಂದು ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ಮೇ 23ರಂದು ಲೋಕಸಭೆ ಚುನಾವಣೆ ಫಲಿತಾಂಶ ಹಿನ್ನೆಲೆ ಹಾಗೂ ಎಕ್ಸಿಟ್ ಪೋಲ್ನಲ್ಲಿ ಹೊರಹೊಮ್ಮಿರುವ ಫಲಿತಾಂಶದ ಕುರಿದು ನಾಯ್ಡು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


