ಅಮಿತ್ ಶಾ ದಾಖಲೆ ಹಿಂದಿಕ್ಕಿದ ರಾಹುಲ್ ಗಾಂಧಿ, ವಯನಾಡ್ ನಲ್ಲಿ 7.90 ಲಕ್ಷ ಮತಗಳ ಭರ್ಜರಿ ಮುನ್ನಡೆ
ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಅಮೇಥಿಯಲ್ಲಿ ಹಿನ್ನಡೆ ಅನುಭವಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡಿನಲ್ಲಿ ದಾಖಲೆಯ ಮುನ್ನಡೆ ಪಡೆದಿದ್ದಾರೆ.

Published On :
ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಅಮೇಥಿಯಲ್ಲಿ ಹಿನ್ನಡೆ ಅನುಭವಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡಿನಲ್ಲಿ ದಾಖಲೆಯ ಮುನ್ನಡೆ ಪಡೆದಿದ್ದಾರೆ.
ಅಮೇಥಿಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ 14030 ಮತಗಳ ಮುನ್ನಡೆ ಸಾಧಿಸಿದ್ದು, ಅಮೇಥಿಯಲ್ಲಿ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ. ಆದರೆ ಕೇರಳದ ವಯನಾಡಿನಲ್ಲಿ ರಾಹುಲ್ ಗಾಂಧಿ ಅವರಿಗೆ ಭರ್ಜರಿ ಬೆಂಬಲ ದೊರೆತಿದ್ದು, ವಯನಾಡಿನಲ್ಲಿ ರಾಹುಲ್ ಗಾಂಧಿ ಬರೊಬ್ಬರಿ 7.90 ಲಕ್ಷ ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆ ಮೂಲಕ ವಯನಾಡಿನಲ್ಲಿ ರಾಹುಲ್ ಗೆಲುವು ಬಹುತೇಕ ಸ್ಪಷ್ಟವಾಗಿದೆ,
ಅಮಿತ್ ಶಾ ದಾಖಲೆ ಹಿಂದಿಕ್ಕಿದ ರಾಹುಲ್ ಗಾಂಧಿ
ಇನ್ನು ಗುಜರಾತ್ ನ ಗಾಂಧಿನಗರದಲ್ಲಿ ಸ್ಪರ್ಧೆ ಮಾಡಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬರೊಬ್ಬರಿ 5 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಆದರೆ ಈ ಗೆಲುವನ್ನೂ ಮೀರಿಸುವಂತೆ ರಾಹುಲ್ ಗಾಂಧಿ ಗೆಲುವಿನತ್ತ ದಾಪುಗಾಲಿರಿಸಿದ್ದು, ಈಗಾಗಲೇ 7.90 ಲಕ್ಷ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ರಾಹುಲ್ ಗಾಂಧಿ ಸ್ಪರ್ಧಿಸುತ್ತಿದ್ದಾರೆ ಎಂಬ ಕಾರಣಕ್ಕೇ ವಯನಾಡ್ ಕ್ಷೇತ್ರ ಭಾರಿ ಸುದ್ದಿಗೆ ಗ್ರಾಸವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


