ಮಹಾಘಟಬಂಧನ್ ಗೆ ಮರ್ಮಾಘಾತ: ಮೋದಿ ಸುನಾಮಿಗೆ ಪ್ರತಿಪಕ್ಷಗಳು ಧೂಳಿಪಟ: ಬಿಜೆಪಿಗೆ ಬಹುಮತ!
2019 ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಮೋಡಿ ಮರುಕಳಿಸಿದ್ದು, ಮಹಾಘಟಬಂಧನ್ ಗೆ ಮರ್ಮಾಘಾತ ಉಂಟಾಗಿದೆ.

Published On :
ನವದೆಹಲಿ: 2019 ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಮೋಡಿ ಮರುಕಳಿಸಿದ್ದು, ಮಹಾಘಟಬಂಧನ್ ಗೆ ಮರ್ಮಾಘಾತ ಉಂಟಾಗಿದೆ.
ಮಧ್ಯಾಹ್ನ 12:30 ರ ವೇಳೆಗೆ ಮತ ಎಣಿಕೆ ಕಾರ್ಯ ನಿರ್ಣಾಯಕ ಹಂತ ತಲುಪಿದ್ದು, ಚುನಾವಣಾ ಫಲಿತಾಂಶದ ಬಗ್ಗೆ ಸ್ಪಷ್ಟ ಚಿತ್ರಣ ಲಭ್ಯವಾಗುತ್ತಿದೆ. ಮತ ಎಣಿಕೆ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಎನ್ ಡಿಎ ಮಧ್ಯಾಹ್ನ 12:30 ರ ವೇಳೆಗೆ 345 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ ಬಿಜೆಪಿ ಒಂದೇ ಪಕ್ಷ 292 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಕಳೆದ ಬಾರಿಯಂತೆ ಸ್ವತಂತ್ರವಾಗಿ, ಯಾವುದೇ ಬೆಂಬಲ ಇಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡುವತ್ತ ಹೆಜ್ಜೆ ಹಾಕಿದೆ.
ಮೋದಿ ವಿರುದ್ಧ ಅಬ್ಬರಿಸಿದ ಕಾಂಗ್ರೆಸ್ ನೇತೃತ್ವದ ಮಹಾಘಬಂಧನ್ ಗೆ ಚುನಾವಣಾ ಫಲಿತಾಂಶದ ಟ್ರೆಂಡ್ ಅಕ್ಷರಶಹ ಮರ್ಮಾಘಾತ ಉಂಟುಮಾಡಿದ್ದು, ಕಾಂಗ್ರೆಸ್ ಪಕ್ಷ ಕೇವಲ 50 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.
ರಾಜ್ಯದಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ತೀವ್ರ ಮುಖಭಂಗ ಉಂಟಾಗಿದ್ದು, ಕೇವಲ 3 ಸ್ಥಾನಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿbjpಬಿಜೆಪಿPoliticsNDAUPAಯುಪಿಎಎನ್ ಡಿಎಲೋಕಸಭಾ ಚುನಾವಣೆ 2019 ಫಲಿತಾಂಶLok Sabha elections 2019 results
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


