ದೇಶ

ಲೋಕಫಲಿತಾಂಶ: ಭಾರೀ ಗೆಲುವಿನತ್ತ ಬಿಜೆಪಿ, ಈ ಸಂಜೆ ನರೇಂದ್ರ ಮೋದಿ ಭಾಷಣ

ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾರೀ ಗೆಲುವು ಸಾಧಿಸುವತ್ತ ದಾಪುಗಾಲಿಟ್ಟಿದೆ.ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಪ್ರಧಾನ ಕಛೇರಿಯಲ್ಲಿ ಕಾರ್ಯಕರ್ತರನ್ನು, ದೇಶದ ಮತದಾರರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ.

ಲೋಕಫಲಿತಾಂಶ: ಭಾರೀ ಗೆಲುವಿನತ್ತ ಬಿಜೆಪಿ, ಈ ಸಂಜೆ ನರೇಂದ್ರ ಮೋದಿ ಭಾಷಣ
ನರೇಂದ್ರ ಮೋದಿ
Published On :
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾರೀ ಗೆಲುವು ಸಾಧಿಸುವತ್ತ ದಾಪುಗಾಲಿಟ್ಟಿದೆ.ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಪ್ರಧಾನ ಕಛೇರಿಯಲ್ಲಿ ಕಾರ್ಯಕರ್ತರನ್ನು, ದೇಶದ ಮತದಾರರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಮೋದಿ ಅವರೊಂದಿಗೆ ಕೆಲವು ಹಿರಿಯ ಕೇಂದ್ರ ಸಚಿವರು ಸೇರಿದಂತೆ ಪಕ್ಷದ ಉನ್ನತ ನಾಯಕರು ಸಂಸದೀಯ ಮಂಡಳಿಯ ಸದಸ್ಯರೂ ಈ ಸಭೆಯಲ್ಲಿ ಹಾಜರಾಗಲಿದ್ದಾರೆ.
ಪಕ್ಷವು ತಮ್ಮನ್ನು ಬೆಂಬಲಿಸಿದ ಮತದಾರರಿಗೆ ಧನ್ಯವಾದ ಹೇಳಲು ಜತೆಗೆ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಮರಳುವ ಕುರಿತು ಘೋಷಿಸಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎನ್ನಲಾಗಿದೆ. ಕಾರ್ಯಕ್ರಮದಲ್ಲಿ ಲಕ್ಷ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.