ಅತ್ಯಧಿಕ ಮತಗಳ ಅಂತರದಿಂದ ಗೆದ್ದ ಬಿಜೆಪಿಯ ಅಭ್ಯರ್ಥಿ ಯಾರು?
2019ರ ಲೋಕಸಭಾ ಚುನಾವಣೆಯಲ್ಲಿ ಗುಜರಾತಿನ ನವಸಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ. ಆರ್. ಪಾಟೀಲ್ ತಮ್ಮ ಸಮೀಪದ ಕಾಂಗ್ರೆಸ್ ಅಭ್ಯರ್ಥಿಗಿಂತ 6.89 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಸರ್ವಕಾಲಿಕ ದಾಖಲೆ ನಿರ್ಮಿಸಿದ್ದಾರೆ.

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಗುಜರಾತಿನ ನವಸಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ. ಆರ್. ಪಾಟೀಲ್ ತಮ್ಮ ಸಮೀಪದ ಕಾಂಗ್ರೆಸ್ ಅಭ್ಯರ್ಥಿಗಿಂತ 6.89 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಸರ್ವಕಾಲಿಕ ದಾಖಲೆ ನಿರ್ಮಿಸಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ಪ್ರೀತಂ ಮುಂಡೆ ಅವರು ಮಹಾರಾಷ್ಟ್ರದ ಬೀಡ್ ಲೋಕಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ 6. 96 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಪ್ರಧಾನಿ ಮೋದಿ ಈ ಬಾರಿ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ 4.79 ಲಕ್ಷ ಮತಗಳ ಅಂತರದಿಂದ ತಮ್ಮ ಸಮೀಪದ ಎಸ್ಪಿ ಅಭ್ಯರ್ಥಿ ಶಾಲಿನಿ ಯಾದವ್ ಅವರನ್ನು ಸೋಲಿಸಿದ್ದಾರೆ. 2014ರಲ್ಲಿ 3. 71 ಲಕ್ಷ ಮತಗಳ ಅಂತರದಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


