ಲೋಕಸಭೆ: ಕಾಂಗ್ರೆಸ್ ಗೆ ಮತ್ತೆ ಪ್ರತಿಪಕ್ಷದ ನಾಯಕನ ಸ್ಥಾನ ಕೈ ತಪ್ಪುವ ಸಾಧ್ಯತೆ
ಕಳೆದ ಬಾರಿ ಕೇವಲ 44 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್, ಲೋಕಸಭೆಯಲ್ಲಿ ಅಧಿಕೃತ ಪ್ರತಿಪಕ್ಷದ ಸ್ಥಾನ ಪಡೆಯುವಲ್ಲಿ ವಿಫಲವಾಗಿತ್ತು. ಈ ಬಾರಿ 52 ಸ್ಥಾನಗಳನ್ನು...
Published On :
ನವದೆಹಲಿ: ಕಳೆದ ಬಾರಿ ಕೇವಲ 44 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್, ಲೋಕಸಭೆಯಲ್ಲಿ ಅಧಿಕೃತ ಪ್ರತಿಪಕ್ಷದ ಸ್ಥಾನ ಪಡೆಯುವಲ್ಲಿ ವಿಫಲವಾಗಿತ್ತು. ಈ ಬಾರಿ 52 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಗೆ ಮತ್ತೆ ಪ್ರತಿಪಕ್ಷದ ಮಾನ್ಯತೆ ಕೈ ತಪ್ಪುವ ಸಾಧ್ಯತೆ ಇದೆ.
ಲೋಕಸಭೆಯಲ್ಲಿ ಅಧಿಕೃತ ಪ್ರತಿಪಕ್ಷದ ನಾಯಕನ ಸ್ಥಾನ ಪಡೆಯಲು ಕನಿಷ್ಠ 55 ಸದಸ್ಯರ ಅಗತ್ಯವಿದೆ. ಆದರೆ ಕಾಂಗ್ರೆಸ್ ಈ ಬಾರಿ ಕೇವಲ 52 ಸ್ಥಾನಗಳನ್ನು ಗೆದ್ದಿದ್ದರಿಂದ 2014ರ ಪರಿಸ್ಥಿತಿಯೇ ಮರುಕಳಿಸುವ ಸಾಧ್ಯತೆಗಳಿವೆ. ಇದರಿಂದಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಪ್ರಬಲ ಪ್ರತಿಪಕ್ಷವೇ ಇಲ್ಲದಂತಾಗಿದೆ.
ಕಳೆದ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕರಾಗಿದ್ದ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪ್ರತಿಪಕ್ಷ ನಾಯಕನ ಸ್ಥಾನ ನೀಡುವಂತೆ ಆಗ್ರಹಿಸಿತ್ತು. ಆದರೆ ಸದನ ಒಟ್ಟಾರೆ ಸಂಖ್ಯೆಯಲ್ಲಿ ಶೇ.10ರಷ್ಟು(55) ಸದಸ್ಯರು ಇಲ್ಲ ಎಂಬ ಕಾರಣಕ್ಕೆ ಸ್ಪೀಕರ್ ಪ್ರತಿಪಕ್ಷದ ನಾಯಕನ ಮಾನ್ಯತೆ ನೀಡಲು ನಿರಾಕರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

