ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು; ನಾಳೆ ಸಿಡಬ್ಲ್ಯುಸಿ ಸಭೆ
17ನೇ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಆತ್ಮಾವಲೋಕನ ...

Published On :
ನವದೆಹಲಿ: 17ನೇ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲು ನಾಳೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ) ಸಭೆ ಕರೆಯಲು ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೈಯಲ್ಲಿ ಸಿಲುಕಿ ಕಾಂಗ್ರೆಸ್ ಸೋತು ಸುಣ್ಣವಾದಂತಾಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ದಕ್ಕಿದ್ದು ಕೇವಲ 52 ಸೀಟುಗಳು. ಆದರೆ ಬಿಜೆಪಿಯ ಅಭೂತಪೂರ್ವ ಗೆಲುವು 2014ಕ್ಕಿಂತಲೂ ಜಾಸ್ತಿಯಾಗಿದ್ದು 303 ಸೀಟು ಸಿಕ್ಕಿದೆ. ಕಳೆದ ವರ್ಷಕ್ಕಿಂತ 30 ಸೀಟುಗಳು ಜಾಸ್ತಿಯಾಗಿದೆ.
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ನ ಘಟಾನುಘಟಿ ನಾಯಕರುಗಳೇ ಸೋತು ಮಕಾಡೆ ಮಲಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಜ್ಯೋತಿರಾಧಿತ್ಯ ಸಿಂಧಿಯಾ, ಮಧ್ಯ ಪ್ರದೇಶ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಅವರಿಗೆ ಕೇಸರಿ ಪಡೆಯ ಅಲೆಯನ್ನು ತಡೆಯಲು ಸಾಧ್ಯವಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rahul Gandhiರಾಹುಲ್ ಗಾಂಧಿCWC meetingಸಿಡಬ್ಲ್ಯುಸಿ ಸಭೆLok Sabha Election Results 2019ಲೋಕಸಭಾ ಚುನಾವಣೆ 2019 ಫಲಿತಾಂಶ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


