ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಳೆ ರಾಹುಲ್ ಗಾಂಧಿ ರಾಜಿನಾಮೆ?
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದ್ದು ಇದರ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ...

Published On :
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದ್ದು ಇದರ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ರಾಹುಲ್ ಗಾಂಧಿ ನಾಳೆ ರಾಜಿನಾಮೆ ನೀಡುವ ಸಾಧ್ಯತೆ ಇದೆ.
ನಾಳೆ ದೆಹಲಿಯಲ್ಲಿ 11 ಗಂಟೆಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಡೆಯಲಿದ್ದು ಈ ಸಿಡಬ್ಲ್ಯೂಸಿ ಸಭೆಯಲ್ಲಿ ರಾಹುಲ್ ಗಾಂಧಿ ರಾಜಿನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಡಬ್ಲ್ಯೂಸಿ ಸಭೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾಗವಹಿಸಲಿದ್ದಾರೆ.
ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರೂ ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋಲು ಕಂಡಿದ್ದಾರೆ. ಅಲ್ಲದೆ ದೇಶಾದ್ಯಂತ ಕಾಂಗ್ರೆಸ್ ಹೀನಾಯ ಪ್ರದರ್ಶನ ನೀಡಿದ್ದರಿಂದ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವುದಾಗಿ ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ತಾಯಿ ಸೋನಿಯಾ ಗಾಂಧಿ ಮುಂದೆ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಹೇಳಾಗುತ್ತಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಒಟ್ಟಾರೆ 349 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೆ. ಇನ್ನು ಬಿಜೆಪಿಯೇ ಒಟ್ಟಾರೆ 303 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇನ್ನು ಕಾಂಗ್ರೆಸ್ ಒಟ್ಟಾರೆ 52 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್ResignರಾಜಿನಾಮೆRahul Gandhiರಾಹುಲ್ ಗಾಂಧಿAICCಎಐಸಿಸಿಲೋಕಸಭೆ ಚುನಾವಣಾ ಫಲಿತಾಂಶLos Sabha Election Result
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


