ಚುನಾವಣೆ ಸೋಲು: ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಹುದ್ದೆ ತೊರೆಯಲು ಮುಂದಾದ ಕಮಲ್ ನಾಥ್
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲಾದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸಿಎಂ, ಕಮಲ್ ನಾಥ್ ತಾವು ರಾಜ್ಯ ಕಾಂಗ್ರೆಸ್ ಘಟಕದ ಮುಖ್ಯಸ್ಥನ ಹುದ್ದೆಗೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

Published On :
ಭೋಪಾಲ್: ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲಾದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸಿಎಂ, ಕಮಲ್ ನಾಥ್ ತಾವು ರಾಜ್ಯ ಕಾಂಗ್ರೆಸ್ ಘಟಕದ ಮುಖ್ಯಸ್ಥನ ಹುದ್ದೆಗೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹುದ್ದೆಗೆ ಕಮಲ್ ನಾಥ್ರಾಜೀನಾಮೆ ಸಲ್ಲಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಪಕ್ ಬಬಾರಿಯಾ ಹೇಳಿದರು. ರಾಜ್ಯದಲ್ಲಿ 29 ಸ್ಥಾನಗಳ ಪೈಕಿ 28 ಸ್ಥಾನಗಳನ್ನು ಬಿಜೆಪಿ ಗೆದ್ದಿದ್ದು ಚಿಂದ್ವಾರಾ ಕ್ಷೇತ್ರದಲ್ಲಿ ಮಾತ್ರ ಏಕೈಕ ಸ್ಥಾನವನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ.
ನಿನ್ನೆ ದೆಹಲಿಯಲ್ಲಿ ನಡೆದಿದ್ದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಗೂ ಸಹ ಕಮಲ್ ನಾಥ್ ಗೈರಾಗಿದ್ದರು.ಮೂಲಗಳ ಪ್ರಕಾರ ತಮ್ಮ ಪಕ್ಷದ ಶಾಸಕರನ್ನು ಒಟ್ತಾಗಿರಿಸಲು ನಾಥ್ ಸಭೆಗೆ ಭಾಗಿಯಾಗದೆ ಕೈಬಿಟ್ಟಿದ್ದರು.
"ಅವರು ಭೋಪಾಲ್ ನಲ್ಲಿ ಪಕ್ಷದ ಕೆಲಸದಲ್ಲಿ ಬ್ಯುಸಿಯಾಗಿದ್ದ ಕಾರಣ ಅವರು ಸಭೆಗೆ ಹಾಜರಾಗಿಲ್ಲ" ಎಂದು ಕಾಂಗ್ರೆಸ್ ಹೇಳಿದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರಳ ಬಹುಮತದೊಡನೆ ಸರ್ಕಾರ ರಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Madhya Pradeshಮಧ್ಯಪ್ರದೇಶKamal nathಕಮಲ್ ನಾಥ್ಲೋಕಸಭಾ ಚುನಾವಣೆ ಫಲಿತಾಂಶLok Sabha poll result
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


