ಝಣ ಝಣ ಕಾಂಚಾಣ: ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ಧುಕೆಲ ದಿನಗಳ ಹಿಂದೆ ಡಿಎಂಕೆ ಅಭ್ಯರ್ಥಿಯೊಬ್ಬರ ಮನೆಯಲ್ಲಿ ಬೃಹತ್ ಪ್ರಮಾಣದಲ್ಲಿ ಹಣವನ್ನು ವಶಪಡಿಸಿಕೊಂಡಿದ್ದರಿಂದ ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ರದ್ದುಪಡಿಸಲಾಗಿದೆ.
ಟಿಟಿವಿ ದಿನಕರನ್ ಗೆ ಐಟಿ ಶಾಕ್: ತಮಿಳುನಾಡಿನ ತೇಣಿಯಲ್ಲಿ 1.48 ಕೋಟಿ ರೂ. ನಗದು ವಶ, ಬೆಂಬಲಿಗರ ದಾಂಧಲೆಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 1.48 ಕೋಟಿ ರೂಪಾಯಿ ನಗದನ್ನು ಆದಾಯ ತೆರಿಗೆ ಇಲಾಖೆ ಬುಧವಾರ ನಸುಕಿನ ಜಾವ...
ಕೋಮು ಹೇಳಿಕೆ: ಕಾಂಗ್ರೆಸ್ ನ ನವಜೋತ್ ಸಿಂಗ್ ಸಿದು ವಿರುದ್ಧ ಎಫ್ ಐಆರ್!ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕ ಹಾಗೂ ಪಂಜಾಬ್ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಸಿಧು ಕೋಮು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.
ಸಮಾಜವಾದಿ ಪಕ್ಷದ ಅಜಮ್ ಖಾನ್ 'ಮೊಗಾಂಬೊ' ಎಂದಿದ್ದ ಕೇಂದ್ರ ಸಚಿವ ನಖ್ವಿ ವಿರುದ್ಧ ಎಫ್ಐಆರ್ಸಮಾಜವಾದಿ ಪಕ್ಷದ ಅಜಂ ಖಾನ್ ಅವರನ್ನು "ಮೊಗಾಂಬೊ" ಎಂದು ಕರೆದದ್ದಾಗಿ ಆರೋಪಿಸಿ ಬಿಜೆಪಿ ಮುಖಂಡ ಮತ್ತು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಪ್ರಧಾನಿ ಮೋದಿ ದೇಶ ವಿರೋಧಿ, ದೇಶವನ್ನು ವಿಭಜಿಸಲು ಹೊರಟಿದ್ದಾರೆ: ರಾಹುಲ್ ಗಾಂಧಿಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶ ವಿರೋಧಿಯಾಗಿದ್ದು ದೇಶವನ್ನು ವಿಭಜಿಸುವ ಕೆಲಸ ...
ವಯನಾಡ್ ನಲ್ಲಿ ರಾಹುಲ್ ಗಾಂಧಿ ಟೆಂಪಲ್ ರನ್, ಪುಲ್ವಾಮ ಸಂತ್ರಸ್ಥರು, ತಂದೆ, ಅಜ್ಜಿಗೆ ಪೂಜೆ!ಹಾಲಿ ಲೋಕಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ದಕ್ಷಿಣ ಭಾರತದಿಂದ ಸ್ಪರ್ಧೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಿವಿಧ ದೇಗುಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಕೆ ಮಾಡಿದ್ದಾರೆ.
ಲೋಕಸಭಾ ಚುನಾವಣೆ: 2ನೇ ಹಂತದಲ್ಲಿ ಕರ್ನಾಟಕ ಸೇರಿದಂತೆ 11 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾನಕರ್ನಾಟಕ ಸೇರಿದಂತೆ 11 ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶದಲ್ಲಿನ 95 ಲೋಕಸಭಾ ಕ್ಷೇತ್ರಗಳಲ್ಲಿ ಗುರುವಾರ ಮತದಾನ ನಡೆಯಲಿದೆ.
ಲೋಕಸಮರ : ಲಖನೌದಿಂದ ಶತ್ರುಘ್ನ ಸಿನ್ಹಾ ಪತ್ನಿ ಪೂನಂ ಸಿನ್ಹಾ ಕಣಕ್ಕೆನಿನ್ನೆಯಷ್ಟೇ ಸಮಾಜವಾದಿ ಪಕ್ಷ ಸೇರಿದ್ದ ಬಾಲಿವುಡ್ ನಟ ಹಾಗೂ ರಾಜಕಾರಣಿ ಶತ್ರುಘ್ನ ಸಿನ್ಹಾ ಅವರ ಪತ್ನಿ ಪೂನಂ ಸಿನ್ಹಾ ಲಖನೌ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ .
ತಮಿಳುನಾಡು: ಡಿಎಂಕೆ ನಾಯಕಿ ಕನ್ನಿಮೋಳಿಯ ನಿವಾಸದ ಮೇಲೆ ಐಟಿ ದಾಳಿಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಸಹೋದರಿ ಹಾಗೂ ಸಂಸದೆ ಕನ್ನಿಮೋಳಿಯ ತೂತುಕುಡಿಯಲ್ಲಿರುವ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ಸಂಜೆ ದಾಳಿ ನಡೆಸಿದ್ದಾರೆ.
ಪಾಕ್ ಪ್ರಧಾನಿ ಹೇಳಿಕೆ ಚುನಾವಣೆ ಮೇಲೆ ಪ್ರಭಾವ ಬೀರುವ ಯತ್ನ ಎಂದ ಪ್ರಧಾನಿ ಮೋದಿಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಕಾಶ್ಮೀರ ವಿವಾದ ಹಾಗೂ ಭಾರತ - ಪಾಕ್ ಶಾಂತಿ ಮಾತುಕತೆಗೆ ಉತ್ತಮ ಅವಕಾಶವಿದೆ ಎಂದಿದ್ದ ಪಾಕಿಸ್ತಾನ...