ನಾನು ಕೂಡ ಹಿಂದೂ, ಹಿಂದೂ ರಾಷ್ಟ್ರ ನಿರ್ಮಾಣದ ಪರೀಕ್ಷೆಯಾಗಲಿ: ದೇವೇಗೌಡ
ಇಡೀ ರಾಷ್ಟ್ರವನ್ನು ಹಿಂದೂ ರಾಷ್ಟ್ರವನ್ನಾಗಿ ಪರಿವರ್ತಿಸಬೇಕು ಎಂಬುದು ಮೋದಿ ಅವರ ಕಲ್ಪನೆಯಾಗಿದ್ದು, ಬಿಜೆಪಿಯವರು ಮಾತ್ರ ಹಿಂದೂಗಳು ಎಂದು ಬಿಂಬಿಸಿಕೊಳ್ಳುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ದೇವೇಗೌಡರು ಪ್ರಶ್ನಿಸಿದ್ದಾರೆ.

ಹಾಸನ: ಮೊಮ್ಮಗ, ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹಾಸನದಲ್ಲಿಂದು ಪ್ರಚಾರ ಮಾಡಿದರು. ಬೇಲೂರು, ಸಕಲೇಶಪುರ ತಾಲೂಕುಗಳಲ್ಲಿ ಮೊಮ್ಮಗನ ಪರ ದೇವೇಗೌಡರು ಬಿರುಸಿನ ಪ್ರಚಾರ ನಡೆಸಿದರು.ಇದಕ್ಕೂ ಮುನ್ನ ಕುಲ ದೇವತೆ ಪಾರ್ವತಿಯ ದರ್ಶನ ಪಡೆದರು.
ಬಳಿಕ ಚನ್ನರಾಯಪಟ್ಟಣ ತಾಲೂಕಿನ ಯಲಿಯೂರಿನಲ್ಲಿ ಮಾತನಾಡಿದ ಅವರು, ಇಡೀ ರಾಷ್ಟ್ರವನ್ನು ಹಿಂದೂ ರಾಷ್ಟ್ರವನ್ನಾಗಿ ಪರಿವರ್ತಿಸಬೇಕು ಎಂಬುದು ಮೋದಿ ಅವರ ಕಲ್ಪನೆಯಾಗಿದ್ದು,ಬಿಜೆಪಿಯವರು ಮಾತ್ರ ಹಿಂದೂಗಳು ಎಂದು ಬಿಂಬಿಸಿಕೊಳ್ಳುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. 2019 ರ ಲೋಕಸಭಾ ಚುನಾವಣೆಯಲ್ಲಿ ಹಿಂದೂ ರಾಷ್ಟ್ರ ನಿರ್ಮಾಣದ ಪರೀಕ್ಷೆಯಾಗಲಿ ಎಂದು ಸವಾಲು ಹಾಕಿದರು.
ತಾವೂ ಸಹ ಹಿಂದೂ. ಮುಸ್ಲಿಂ, ಕ್ರಿಶ್ಚಿಯನ್ ಅಲ್ಲ. ಹಿಂದೂ ಆಗಿರುವ ತಾವು ಎಂದಿಗೂ ಏಕ ಧರ್ಮದ ಪರ ಮಾತನಾಡದೇ ಎಲ್ಲಾ ಧರ್ಮವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡಿದ್ದೇನೆ. ದೇಶದಲ್ಲಿ ಎಲ್ಲಾ ಧರ್ಮೀಯರು ಅನೋನ್ಯವಾಗಿ ಬಾಳಲು ಸಾಧ್ಯವಾಗುವಂತಹ ಏಕ ರೂಪದ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದರು.
ಬಿಜೆಪಿ ಎಂದಿಗೂ ದೇಶಕ್ಕಾಗಿ ಹೋರಾಟ ಮಾಡಿಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು ಮಹಾತ್ಮ ಗಾಂಧೀಜಿ. ನೌಕಾಲಿಯಲ್ಲಿ ನಡೆದ ಕೋಮುಗಲಭೆ ಸಂದರ್ಭದಲ್ಲಿ ಮುಸ್ಲಿಮರ ಹತ್ಯೆಯಾದಾಗಲೂ ಸಹ ಗಾಂಧೀಜಿಯವರು ಮುಸ್ಲಿಮರ ಪರ ಹೋರಾಟ ಮಾಡಿದ್ದಾರೆ. ದೇಶದಲ್ಲಿ ಅಂಬೇಡ್ಕರ್ ಅವರು ಬರೆದುಕೊಟ್ಟ ಸಂವಿಧಾನ ಇದೆ. ಈ ಸಂವಿಧಾನವನ್ನು ದೇಶದ 130 ಕೋಟಿ ಜನರೂ ಸಹ ಒಪ್ಪುತ್ತಾರೆ. ಆದರೆ ಬಿಜೆಪಿ ನಾಯಕರು ಸಂವಿಧಾನವನ್ನೇ ಬದಲಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


