ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಪ್ರಕಟ: ಪ್ರಹ್ಲಾದ್ ಜೋಶಿ ವಿರುದ್ಧ ಶಕೀರ್ ಸನದಿ ಕಣಕ್ಕೆ
ಕಾಂಗ್ರೆಸ್ ಕೊನೆಗೂ ಧಾರಾವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಸೋಮವಾರ ಅಧಿಕೃತವಾಗಿ ಪ್ರಕಟಿಸಿದ್ದು, ಮಾಜಿ ಸಂಸದ...

Published On :
ಬೆಂಗಳೂರು: ಕಾಂಗ್ರೆಸ್ ಕೊನೆಗೂ ಧಾರಾವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಸೋಮವಾರ ಅಧಿಕೃತವಾಗಿ ಪ್ರಕಟಿಸಿದ್ದು, ಮಾಜಿ ಸಂಸದ ಐ.ಜಿ ಸನದಿ ಅವರ ಪುತ್ರ ಶಕೀರ್ ಸನದಿ ಅವರು ಬಿಜೆಪಿಯ ಪ್ರಹ್ಲಾದ್ ಜೋಷಿ ವಿರುದ್ಧ ಕಣಕ್ಕಿಳಿಯಲಿದ್ದಾರೆ.
ಬಿಜೆಪಿ ಭದ್ರಕೋಟೆಯಾಗಿರುವ ಧಾರವಾಡದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಟಿಕೆಟ್ ತಪ್ಪಿದ್ದು, ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನ ಭುಗಿಲೆದ್ದಿದೆ.
ಧಾರವಾಡ ಲೋಕಸಭಾ ವ್ಯಾಪ್ತಿಗೆ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳನ್ನು ಬರುತ್ತವೆ. ಈ ಪೈಕಿ ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಶಾಸಕರಿದ್ದು, ಇನ್ನುಳಿದ ಧಾರವಾಡದ ಐದು, ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಅಲ್ಲದೇ ಅಲ್ಪಸಂಖ್ಯಾತರು ಹೆಚ್ಚಾಗಿದ್ದು, ಸಹಜವಾಗಿಯೇ ಇಬ್ಬರು ನಡುವೇ ಪೈಪೋಟಿ ಏರ್ಪಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


