ಬಿಎಸ್ ವೈ ಸಮ್ಮುಖದಲ್ಲಿ ಕೆ.ರತ್ನಪ್ರಭ ಬಿಜೆಪಿ ಸೇರ್ಪಡೆ!
ಪ್ರಮುಖ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಕೆ ರತ್ನಪ್ರಭ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಲಾಗಿದೆ.

Published On :
ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಕೆ ರತ್ನಪ್ರಭ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಲಾಗಿದೆ.
ಈ ಬಗ್ಗೆ ಬಿಜೆಪಿ ಮೂಲಗಳು ಮಾಹಿತಿ ನೀಡಿದ್ದು, ರಾಜ್ಯ ಕಾರ್ಯದರ್ಶಿಯಾಗಿ ಈ ಹಿಂದೆ ಕೆಲಸ ನಿರ್ವಹಿಸಿದ್ದ ಕೆ.ರತ್ನಪ್ರಭ ಬಿಜೆಪಿ ಸೇರ್ಪಡೆಗೊಳ್ಳುವುದು ಖಚಿತವಾಗಿದೆ. ಈ ಬಗ್ಗೆ ಸ್ವತಃ ಬಿಜೆಪಿಯ ಕಲಬುರ್ಗಿ ಲೋಕಸಭಾ ಅಭ್ಯರ್ಥಿ ಉಮೇಶ್ ಜಾಧವ್ ಅವರು ಮಾಹಿತಿ ನೀಡಿದ್ದು, ಕಲಬುರ್ಗಿಯಲ್ಲಿ ಉಮೇಶ್ ಜಾಧವ್ ತಮ್ಮ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಇಂದು ಕಲಬುರ್ಗಿಯಲ್ಲಿ ಬೃಹತ್ ರ್ಯಾಲಿ ಮುಖಾಂತರ ಡಿಸಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವುದಾಗಿ ಹೇಳಿದ ಜಾಧವ್ ಅವರು, ರ್ಯಾಲಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಸಾಥ್ ನೀಡಲಿದ್ದಾರೆ. ಅಂತೆಯೇ ಇದೇ ಸಂದರ್ಭದಲ್ಲಿ ಕೆ. ರತ್ನಪ್ರಭ ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎಂದು ಜಾಧವ್ ಮಾಹಿತಿ ನೀಡಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಸಂಸ್ಥೆ ಜೊತೆ ಕಲಬುರಗಿಯಲ್ಲಿ ಮಾತನಾಡಿರುವ ರತ್ನಪ್ರಭ ಅವರು, ಪ್ರಧಾನಿ ಮೋದಿ ಅವರು ವಿಶಿಷ್ಟ ರೀತಿಯಲ್ಲಿ ದೇಶದ ಅಭಿವೃದ್ದಿ ಮಾಡುತ್ತಿದ್ದಾರೆ. ಹೀಗಾಗಿ ನನಗೆ ವೈಯುಕ್ತಿಕವಾಗಿ ಜನರ ಸೇವೆ ಮಾಡಲು ಬಿಜೆಪಿ ಪಕ್ಷ ಸೂಕ್ತವೆಂದೆನಿಸಿತು. ಹೀಗಾಗಿ ಬಿಜೆಪಿಗೆ ಸೇರುತ್ತಿದ್ದೇನೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengalurubjpಬಿಜೆಪಿPoliticsರಾಜಕೀಯಲೋಕಸಭಾ ಚುನಾವಣೆ 2019Loksabha Elecetion 2019K Rathna Prabhaಕೆ ರತ್ನಪ್ರಭಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


