ರಾಜ್ಯದಲ್ಲಿ 22, ದೇಶದಲ್ಲಿ ಬಿಜೆಪಿಗೆ 300 ಸೀಟುಗಳಲ್ಲಿ ಜಯ, ಮಂಡ್ಯದಲ್ಲಿ ಸುಮಲತಾ ಗೆಲವು ಶತಃಸಿದ್ಧ: ಬಿಎಸ್ ವೈ
ಸೊಕ್ಕಿನ ಮಾತುಗಳನ್ನು ಆಡುವ ಮೂಲಕ ಸುಮಲತಾ ಅವರನ್ನು ಜೆಡಿಎಸ್ ನಾಯಕರು ಅಪಮಾನ ಮಾಡುತ್ತಿದ್ದಾರೆ ಇದಕ್ಕೆಲ್ಲಾ ಏಪ್ರಿಲ್ 18ರಂದು ಉತ್ತರ ಸಿಗಲಿದೆ, ..

Published On :
ಕಲಬುರಗಿ: ಸೊಕ್ಕಿನ ಮಾತುಗಳನ್ನು ಆಡುವ ಮೂಲಕ ಸುಮಲತಾ ಅವರನ್ನು ಜೆಡಿಎಸ್ ನಾಯಕರು ಅಪಮಾನ ಮಾಡುತ್ತಿದ್ದಾರೆ ಇದಕ್ಕೆಲ್ಲಾ ಏಪ್ರಿಲ್ 18ರಂದು ಉತ್ತರ ಸಿಗಲಿದೆ, ಸುಮಲತಾ ಅಂಬರೀಷ್ ಅವರ ಗೆಲುವು ಶತಃಸಿದ್ದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್,ಯಡಿಯೂರಪ್ಪ ಹೇಳಿದ್ದಾರೆ.
ಕಲಬುರಗಿಯ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ನಾಮಪತ್ರ ಸಲ್ಲಿಕೆ ವೇಳೆ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಬಿಜೆಪಿ 22 ಹಾಗೂ ಒಟ್ಟಾರೆ ಇಡೀ ದೇಶದಲ್ಲಿ 300 ಸೀಟುಗಳನ್ನು ಗೆಲ್ಲಲಿದೆ ಹಾಗೂ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ಪಡಿಸಿದ್ದಾರೆ.
ಸುಮಲತಾ ಅವರ ಕುರಿತು ಜಾತಿ ರಾಜಕಾರಣವನ್ನು ಜೆಡಿಎಸ್‌ನವರು ಮಾಡುತ್ತಿದ್ದಾರೆ. ಅಲ್ಲಿನ ಎಲ್ಲರೂ ಸಹ ಹಗುರವಾಗಿ ಮಾತುಗಳನ್ನು ಆಡುತ್ತಿದ್ದಾರೆ. ಇದರಿಂದ ಬೇಸತ್ತಿರುವ ಜನತೆ ಇದೀಗ ಜೆಡಿಎಸ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹೀಗಾಗಿ, ಮಂಡ್ಯದಲ್ಲಿ 100ಕ್ಕೆ 100ರಷ್ಟು ಸುಮಲತಾ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಯಡಿಯೂರಪ್ಪ ಹೇಳಿದರು.
ಕಲಬುರಗಿಯ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಗೆದ್ದೇ ಗೆಲ್ಲುತ್ತಾರೆ ಎಂದ ಯಡಿಯೂರಪ್ಪ ಅವರು, ಜಾಧವ್ ಅವರನ್ನು ಪಕ್ಷದ ಹೈ ಕಮಾಂಡ್ ಪಕ್ಷಕ್ಕೆ ಬರಮಾಡಿಕೊಂಡಿದೆ ಎಂದು ಪ್ರಶ್ನೆಗೆ ಉತ್ತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


