ಕರ್ನಾಟಕ

ಸುಮಲತಾ ಪರ ಕಾಂಗ್ರೆಸ್‌ ಧ್ವಜ ಹಿಡಿದರೆ ಕ್ರಮ- ದಿನೇಶ್: ಎಚ್ಚರಿಕೆಗೂ 'ಕೈ' ಕಾರ್ಯಕರ್ತರ ಡೋಂಟ್ ಕೇರ್

ಮಂಡ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತದ ಹೊಗೆಯಾಡುತ್ತಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಜೊತೆಗೆ ಕಾಂಗ್ರೆಸ್‌ ಧ್ವಜ ,...

ಸುಮಲತಾ ಪರ ಕಾಂಗ್ರೆಸ್‌ ಧ್ವಜ ಹಿಡಿದರೆ ಕ್ರಮ- ದಿನೇಶ್: ಎಚ್ಚರಿಕೆಗೂ 'ಕೈ' ಕಾರ್ಯಕರ್ತರ ಡೋಂಟ್ ಕೇರ್
ದಿನೇಶ್ ಗುಂಡೂರಾವ್
Published On :
ಮಂಡ್ಯ: ಮಂಡ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತದ ಹೊಗೆಯಾಡುತ್ತಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಜೊತೆಗೆ ಕಾಂಗ್ರೆಸ್‌ ಧ್ವಜ ಹಿಡಿದುಕೊಂಡು ಪ್ರಚಾರ ನಡೆಸಿದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ.
ಆದರೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿರುವ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಸ್ವಾಭಿಮಾನ ಉಳಿಸಿಕೊಳ್ಳಲು ಸುಮಲತಾಗೆ ಬೆಂಬಲ ನೀಡುವುಜದಾಗಿ ಹೇಳಿದ್ದಾರೆ. ಕಾರ್ಯಕರ್ತರಿಂದಲೇ ಪಕ್ಷವೇ ಹೊರತು ನಾಯಕರಿಂದ ಪಕ್ಷವಲ್ಲ , ಕಾರ್ಯಕರ್ತರಿಂದ ಪಕ್ಷ ಮತ್ತು ನಾಯಕರನ್ನು ಉಳಿಸಲು ಮಾಕ್ರ ಸಾಧ್ಯ ಎಂದು ಹೇಳಿರುವ ಕಾರ್ಯಕರ್ತರು ಹಿರಿಯ ಕಾಂಗ್ರೆಸ್ ಮುಖಂಡರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. 
ಇನ್ನೂ ಕೆಪಿಸಿಸಿ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರ ಎಚ್ಚರಿಕೆಗೆ ಕ್ಯಾರೆ ಅನ್ನದ ಕಾಂಗ್ರೆಸ್ ಕಾರ್ಯಕರ್ತರು ಇಂದು ದರ್ಶನ್ ಪ್ರಚಾರಕ್ಕೆ ಆಗಮಿಸುವ ಗ್ರಾಮಗಳಲ್ಲಿ ಕಾಂಗ್ರೆಸ್ ಭಾವುಟ ಹಿಡಿದು ಸಿದ್ಧರಾಗಿ ನಿಂತಿದ್ದಾರೆ.
ನಾಗಮಂಗಲದ ಹಲವು ಹಳ್ಳಿಗಳಲ್ಲಿ ಎತ್ತಿನ ಬಂಡಿಯಲ್ಲಿ ನಟ ದರ್ಶನ್ ಪ್ರಚರಾ ಮಾಡಲಿದ್ದು, ದರ್ಶನ್ ಸ್ವಾಗತಿಸಲು ಕಾಂಗ್ರೆಸ್ ಮತ್ತು ಬಿಜೆಪಿ ಬಾವುಟಗಳು ಎಲ್ಲೆಲ್ಲೂ ರಾರಾಜಿಸುತ್ತಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.