ಕಾರ್ಯಕರ್ತರ ಮನಸ್ಸು ಒಡೆದಿದೆ, ಕಾಂಗ್ರೆಸ್ ಅಭ್ಯರ್ಥಿ ಸೋತರೇ ನಾವು ಹೊಣೆಯಲ್ಲ: ಜಿ.ಟಿ ದೇವೇಗೌಡ
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸೋತರೆ ನಾವು ಹೊಣೆಯಲ್ಲ ಎಂದು ಪ್ರೌಢ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಹೇಳಿದ್ದಾರೆ....

Published On :
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸೋತರೆ ನಾವು ಹೊಣೆಯಲ್ಲ ಎಂದು ಪ್ರೌಢ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಹೇಳಿದ್ದಾರೆ.
ಮೈಸೂರಿನಲ್ಲಿ ಇಂದು ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವ ಜಿ.ಟಿ ದೇವೇಗೌಡ ಭಾಗವಹಿಸಿದ್ದರು, ಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತ ಪಡಿಸಲಾಯಿತು. ಎಷ್ಟು ಸಮಾಧಾನ ಪಡಿಸಲು ಯತ್ನಿಸಿದರೂ ಕಾರ್ಯಕರ್ತರು ಸುಮ್ಮನಾಗಿಲ್ಲ,
ಇನ್ನೂ ಮೈಸೂರು -ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಅದಕ್ಕೆ ನಾವು ಹೊಣೆಯಲ್ಲ, ನಮ್ಮ ಪ್ರಯತ್ನ ನಾವು ಮಾಡುತ್ತೇವೆ, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ವಿಶ್ವನಾಥ್ ಸೋತಿದ್ದರು, ಆಗ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತರಾ ಎಂದು ಜಿ,ಟಿ ದೇವೇಗೌಡ ಪ್ರಶ್ನಿಸಿದ್ದಾರೆ.
ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಏಪ್ರಿಲ್ 7ರಂದು ಜಂಟಿ ಪತ್ರಿಕಾ ಗೋಷ್ಟಿ ಮಾಡುತ್ತೇವೆ, ಮೈಸೂರಿನಲ್ಲಿ ಇಬ್ಬರು ಒಟ್ಟಾಗಿ ಪ್ರಚಾರ ಮಾಡುತ್ತೇವೆ, ಈ ಸಂಬಂಧ ಜಿ.ಟಿ ದೇವೇಗೌಡ ಅವರ ಜೊತೆ ಚರ್ಚಿಸುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PoliticsರಾಜಕೀಯಮೈಸೂರುMysuruJDs Meetingಜೆಡಿಎಸ್ ಸಭೆಜಿ.ಟಿ ದೇವೇಗೌಡParty workersಪಕ್ಷದ ಕಾರ್ಯಕರ್ತರುG.T Devegowda
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


