ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ, ಜೆಡಿಎಸ್ ಸೋಲಿಸಲು ಚಕ್ರವ್ಯೂಹ: ಎಚ್.ಡಿ ಕುಮಾರಸ್ವಾಮಿ
: ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ...

Published On :
ಚಿಕ್ಕಮಗಳೂರು: ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.
ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ ವಿಶ್ವಾಸವಿದೆ ಎಂದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್‍ನನ್ನು ಸೋಲಿಸಲು ರೂಪಿಸಿರುವ ಚಕ್ರವ್ಯೂಹಕ್ಕೆ ಮೇ.23ರಂದು ಚುನಾವಣಾ ಫಲಿತಾಂಶ ಹೊರಬಂದ ನಂತರ ಸೂಕ್ತ ಉತ್ತರ ನೀಡುವುದಾಗಿ ಹೇಳಿದರು.
ಕಳೆದ ಮೂರು ತಿಂಗಳಿನಿಂದಲೂ ಮಂಡ್ಯದಲ್ಲಿ ಜೆಡಿಎಸ್ ಮಣಿಸಲು ಕಾರ್ಯತಂತ್ರವನ್ನು ಹೆಣೆಯಲಾಗಿದೆ. ಆದರೆ ಸ್ಥಳೀಯ ಪರಿಸ್ಥಿತಿಯೇ ಭಿನ್ನವಾಗಿದೆ. ಯಾರು ಸರಿಯಾದ ದುಡಿಮೆ ಮಾಡುತ್ತಾರೆ ಎಂಬುದು ಅಲ್ಲಿನ ಜನರಿಗೆ ಗೊತ್ತಿದೆ. ದುಡಿಮೆ ಮಾಡುವವರನ್ನು ಜನರು ಕೈ ಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್JDSPoliticsರಾಜಕೀಯಜೆಡಿಎಸ್H.D Kumaraswamyಎಚ್.ಡಿ ಕುಮಾರಸ್ವಾಮಿಮಂಡ್ಯMandyaಸುಮಲತಾ ಅಂಬರೀಷ್Sumalatha Ambhareesh
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


