ಕರ್ನಾಟಕ

ಮಂಡ್ಯ ಬಿಟ್ಟು ಉಳಿದ ಕಡೆ ಮೈತ್ರಿ ಧರ್ಮ ಪಾಲಿಸಲಿ- ಚಲುವರಾಯ ಸ್ವಾಮಿ

ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆಗೆ ಸಭೆ ನಡೆಸಿದರು.ಮಾಜಿ ಸಚಿವರಾದ ಚೆಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ರಮೇಶ್ ಬಂಡಿ ಸಿದ್ದೇಗೌಡ ಮತ್ತಿತರ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮಂಡ್ಯ ಬಿಟ್ಟು ಉಳಿದ ಕಡೆ ಮೈತ್ರಿ ಧರ್ಮ ಪಾಲಿಸಲಿ- ಚಲುವರಾಯ ಸ್ವಾಮಿ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಮಂಡ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ನಡುವಿನ ಭಿನ್ನಾಭಿಪ್ರಾಯ ಅಸಹಕಾರ ಉಭಯ ಪಕ್ಷಗಳ ನಾಯಕರ ತಲೆ ನೋವಿಗೆ ಕಾರಣವಾಗಿದೆ.ಈ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆಗೆ ಸಭೆ ನಡೆಸಿದರು.
ಮಾಜಿ ಸಚಿವರಾದ ಚೆಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ರಮೇಶ್ ಬಂಡಿ ಸಿದ್ದೇಗೌಡ ಮತ್ತಿತರ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, ಸಿದ್ದರಾಮಯ್ಯ ನಮ್ಮ ಮೇಲೆ ಡಿಪೆಂಡ್ ಆಗಿದ್ದರೆ, ನಾವು ಸ್ಥಳೀಯ ಕಾರ್ಯಕರ್ತರನ್ನು ಅವಲಂಬಿಸಿದ್ದೇವೆ. ಅವರೊಂದಿಗೆ ಜೊತೆಗೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಆದಾಗ್ಯೂ,  ಮಂಡ್ಯ ಬಿಟ್ಟು ಉಳಿದ ಕಡೆ ಮೈತ್ರಿ ಧರ್ಮ ಪಾಲಿಸಲಿ  ಎಂದು ಕುಮಾರಸ್ವಾಮಿ ಅವರಿಗೆ ಸೂಕ್ಷ್ಮವಾಗಿ ಹೇಳುವುದಾಗಿ ಚೆಲುವರಾಯಸ್ವಾಮಿ ನುಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.