ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೊಗಳಿದ ತೇಜಸ್ವಿನಿ ಅನಂತ್ ಕುಮಾರ್ : ದಳಪತಿ ಪರ ಟ್ವೀಟ್!
ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ಅವರನ್ನು ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಹಾಡಿ ಹೊಗಳಿದ್ದಾರೆ....

Published On :
ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ಅವರನ್ನು ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಹಾಡಿ ಹೊಗಳಿದ್ದಾರೆ.
ನಿಖಿಲ್ ಗೌಡ ಸ್ಟ್ರಾ ಇಲ್ಲದೆ ಎಳನೀರು ಕುಡಿತಾನಂತೆ, ಕಾರಣ ಏನೇ ಇರಲಿ ಇದನ್ನು ನಾವೆಲ್ಲ ಕಲಿಯಲೇಬೇಕು, ಯಾಕೆ ಗೊತ್ತಾ? ಬೆಂಗಳೂರಿನಲ್ಲಿ ಪ್ರತಿದಿನ ಲಕ್ಷಂತಾರ ಸ್ಟ್ರಾ ಎಳನೀರು ಕುಡಿದು ಬಿಸಾಕ್ತಿವಿ, ಈ ಸ್ಟ್ರಾಗಳು ಮರು ಸಂಸ್ಕರಣೆ ಮಾಡಲಾಗುವುದಿಲ್ಲ, ನೀರಿಗೋ, ಕಾಡಿಗೋ ಭೂಮಿಗೋ ಸೇರಿ ಮೂಕ ಪ್ರಾಣಿಗಳಿಗೆ ತೊಂದರೆ ಸ್ಟ್ರಾ ಉಪಯೋಗ ಬಿಟ್ಟಾಕೋಣ ಎಂದು ಟ್ವೀಟ್ ಮಾಡಿದ್ದಾರೆ,
ಬೆಂಗಳೂರು ದಕ್ಷಿಣ ಲೋಕಸಭೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೇಜಸ್ವಿನಿ ಅನಂತ್ ಕುಮಾರ್ ಬಯಸಿದ್ದರು, ಆದರೆ ಹೈಕಮಾಂಡ್ ತೇಜಸ್ವಿನಿ ಬದಲು ತೇಜಸ್ವಿ ಸೂರ್ಯ ಅವರನ್ನು ಕಣಕ್ಕಿಳಿಸಿದೆ, ಇದರಿಂದ ಸಹಜವಾಗಿಯೇ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಅಸಮಾಧಾನ ಮೂಡಿಸಿದೆ.
ನಿಖಿಲ್ ಗೌಡ ಸ್ಟ್ರಾ ಇಲ್ಲದೆ ಎಳನೀರು ಕುಡಿತಾನಂತೆ, ಕಾರಣ ಏನೇ ಇರಲಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
JDSbjpಬಿಜೆಪಿPoliticsರಾಜಕೀಯTweetಜೆಡಿಎಸ್ಟ್ವೀಟ್Nikhil Kumarನಿಖಿಲ್ ಕುಮಾರ್Tejaswini Ananth Kumarತೇಜಸ್ವಿನಿ ಅನಂತ್ ಕುಮಾರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


