ಮಂಡ್ಯ: ಚುನಾವಣೆ ಪ್ರಚಾರಕ್ಕೆ ಮಾಜಿ ಸಂಸದ ಮಾದೇಗೌಡರಿಂದ ಹಣಕ್ಕೆ ಬೇಡಿಕೆ, ಆಡಿಯೋ ಬಹಿರಂಗ
ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ಮುಖಂಡ ಜಿ. ಮಾದೇಗೌಡ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ಅವರಿಗೆ ಕರೆ ಮಾಡಿ ಹಣದ ವ್ಯವಸ್ಥೆ ಮಾಡುವಂತೆ ಕೇಳಿರುವ ಆಡಿಯೋ ಟೇಪ್ ಬಹಿರಂಗವಾಗಿದೆ.

ಮಂಡ್ಯ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪ್ರತಿಷ್ಠೆಯ ಕಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ಮುಖಂಡ ಜಿ. ಮಾದೇಗೌಡ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ಅವರಿಗೆ ಕರೆ ಮಾಡಿ ಹಣದ ವ್ಯವಸ್ಥೆ ಮಾಡುವಂತೆ ಕೇಳಿರುವ ಆಡಿಯೋ ಟೇಪ್ ಬಹಿರಂಗವಾಗಿರುವುದು ವರದಿಯಾಗಿದೆ.
ಪ್ರಚಾರಕ್ಕೆ ತೆರಳಲು ಹುಡುಗರು ಹಣ ಕೇಳುತ್ತಾರೆ. ನನ್ನ ಬಳಿ ಹಣ ಇಲ್ಲ. ಹಣಕ್ಕೆ ವ್ಯವಸ್ಥೆ ಮಾಡಿ ಎಂದು ಮಾದೇಗೌಡರೇ ನೇರವಾಗಿಯೇ ಸಚಿವ ಪುಟ್ಟರಾಜು ಅವರನ್ನು ಕೇಳಿದ್ದಾರೆ. ಅಲ್ಲದೆ ಹಣದ ಬೇಡಿಕೆ ಇಟ್ಟಿದ್ದನ್ನು ಟಿವಿ ಮಾಧ್ಯಮಗಳ ಮುಂದೆ ಸಮರ್ಥಿಸಿಕೊಂಡಿದ್ದಾರೆ.
ಈಗ ಹಣ ಇಲ್ಲದೆ ಚುನಾವಣೆಗೆ ಹೋಗುವವರು ದೇಶದಲ್ಲಿ ಯಾರಿದ್ದಾರೆ ನೀವೆ ತಿಳಿಸಿ ಎಂದು ಮಾದೇಗೌಡರು ಖಾಸಗಿ ಟಿವಿ ಚಾನೆಲ್ ಗೆ ಹೇಳಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


