ಪ್ರಜ್ವಲ್ ಸೋಲಿಸದಿದ್ದರೇ ರೇವಣ್ಣ ಪಾಠ ಕಲಿಯುವುದಿಲ್ಲ: ಕಾರ್ಯಕರ್ತರಿಗೆ ಪ್ರೀತಂ ಗೌಡ ಪಾಠ; ಆಡಿಯೋ ವೈರಲ್
ಹಾಸನ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಈ ಚುನಾವಣೆಯಲ್ಲಿ ಗೆದ್ದರೇ ಮುಗಿಯಿತು, ರೇವಣ್ಣ ಅವರನ್ನು ಮಣಿಸಲು ...

Published On :
ಹಾಸನ: ಹಾಸನ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಈ ಚುನಾವಣೆಯಲ್ಲಿ ಗೆದ್ದರೇ ಮುಗಿಯಿತು, ರೇವಣ್ಣ ಅವರನ್ನು ಮಣಿಸಲು ಸಾಧ್ಯವಿಲ್ಲ, ಹೀಗಾಗಿ ಪ್ರಜ್ವಲ್ ಸೋಲಿಸಬೇಕು ಎಂದು ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿದ್ದಾರೆ.
ಪ್ರೀತಂಗೌಡ ಅವರು ಕಾರ್ಯಕರ್ತರಿಗೆ ಪಾಠ ಮಾಡಿರುವ ಆಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ,
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ಗೆದ್ದರೇ ಅವರ ಮನೆಯಲ್ಲಿ ಪಾತ್ರೆ ತೊಳೆಯುವ ಲಚ್ಚಿಯನ್ನು ನಿಲ್ಲಿಸಿದರೂ ಗೆಲ್ಲುತ್ತೇವೆ ಎಂಬ ಭಾವನೆ ಬಂದು ಬಿಡುತ್ತದೆ, ಅಂಥಹ ಭಾವನೆ ಬರದಂತೆ ನೋಡಿಕೊಳ್ಳಿ ಎಂದು ಪ್ರೀತಂ ಗೌಡ ಹೇಳಿದ್ದಾರೆ.
ಹುಡುಗನ ಹತ್ರ ಹೋಗಿ ಕೈ ಕಟ್ಟಿ ನಿಲ್ಲುತ್ತೀರಾ ಎಂದು ಜೆಡಿಎಸ್ ಕಾರ್ಯಕರ್ತರನ್ನು ಕೇಳಿ, ಈ ರೀತಿ ಭಯ ಹುಟ್ಟಿಸಿ ಆ ಮೂಲಕ ಜೆಡಿಎಸ್ ಕಾರ್ಯಕರ್ತರ ಮನವೊಲಿಸಬೇಕು, ಸೋತಾಗಲೇ ಕಾರ್ಯಕರ್ತರನ್ನು ಕರೆದು ಕೆಲಸ ಕೊಡಬೇಕು, ನಾವು ನಿಮಗೆ ಸಹಾಯ ಮಾಡುತ್ತೇವೆ ಎಂದು ಹೇಳಿದ್ದಾರೆ.
ಈಗ ಬೂತ್ ಗೆ ಒಂದು ಲಕ್ಷ ರೂ ನೀಡಿದ್ದಾರೆ, ಸೋಲಿಸಿದರೇ ಮುಂದಿನ ಸಲ 5 ಲಕ್ಷ ಕೊಡುತ್ತಾರೆ.ಈ ವಿಷಯದಲ್ಲಿ ನಿಮಗೆ ಅನುಕೂಲ ಮಾಡಿಕೊಡುತ್ತೇವೆ ಎಂದು ಮನವೊಲಿಸಬೇಕು ಎಂದು ಅವರು ಆಡಿಯೋದಲ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


