ಹೌದಪ್ಪ, ನನಗೆ ಬಾಡಿಗೆ ಕಟ್ಟೋ ಯೋಗ್ಯತೆಯಿಲ್ಲ, ಆದರೆ? ನಿಖಿಲ್ ಗೆ ಯಶ್ ಕೊಟ್ಟ ತಿರುಗೇಟು ಏನು?
ಮಂಡ್ಯ ಲೋಕಸಭೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ವಯಕ್ತಿಕ ನಿಂದನೆ ತಾರಕಕ್ಕೇರಿದೆ, ಮನೆ ಬಾಡಿಗೆ ಕಟ್ಟಲು ಯೋಗ್ಯತೆ ಇಲ್ಲದವರು ನಮ್ಮ ಬಗ್ಗೆ ...

Published On :
ಮಂಡ್ಯ: ಮಂಡ್ಯ ಲೋಕಸಭೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ವಯಕ್ತಿಕ ನಿಂದನೆ ತಾರಕಕ್ಕೇರಿದೆ, ಮನೆ ಬಾಡಿಗೆ ಕಟ್ಟಲು ಯೋಗ್ಯತೆ ಇಲ್ಲದವರು ನಮ್ಮ ಬಗ್ಗೆ ಮಾತನಾಡುತ್ತಾರೆ ಎಂಬ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ನಟ ಯಶ್ ತಿರುಗೇಟು ನೀಡಿದ್ದಾರೆ.
ಉಮ್ಮಡಹಳ್ಳಿಯಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರ ಪ್ರಚಾರದಲ್ಲಿ ಗ್ರಾಮಸ್ಥರ ಒತ್ತಾಯದ ಮೇರೆಗೆ ನಿಖಿಲ್ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದರು,
ಹೌದಪ್ಪ, ನನಗೆ ಮನೆ ಬಾಡಿಗೆ ಕಟ್ಟೋ ಯೋಗ್ಯತೆ ಇಲ್ಲ, ಆದರೆ ಕೊಪ್ಪಳ ಜನತೆಗೆ ಏನು ಮಾಡಿದ್ದೇನೆ ಎಂಬುದನ್ನು ಕೇಳಿ ನೋಡಿ ಎಂದು ಹೇಳಿದ್ದಾರೆ, ಕೇವಲ ಮಂಡ್ಯದಲ್ಲಿ ಮಾತ್ರ ರೈತರಿಲ್ಲ, ರಾಜ್ಯದ ಇತರ ಭಾಗದಲ್ಲೂ ರೈತರಿದ್ದಾರೆ, ಅಲ್ಲಿ ನೀರಿನ ಸಮಸ್ಯೆ ತಾಂಡವವಾಡುತ್ತಿದೆ, ಮನೆ ಬಾಡಿಗೆ ಕಟ್ಟುವ ಹಣವನ್ನು ತೆಗೆದುಕೊಂಡು ಹೋಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದೇವೆ ಎಂದು ಹೇಳಿದ್ದಾರೆ.
ನಾವು ಬರಿ ಬಾಯಲ್ಲಿ ಮಾತನಾಡುವವರಲ್ಲ, ನಾನು ಕಷ್ಟಪಟ್ಟು ಸಂಪಾದಿಸಿದ ಹಣದಿಂದ ಅಲ್ಲಿನ ಜನರಿಗೆ ಸಹಾಯ ಮಾಡಿದ್ದೇನೆ ಹೊರತು ಜನರ ತೆರಿಗೆ ಹಣದಿಂದ ನಾನು ಸಹಾಯ ಮಾಡಿಲ್ಲ ಎಂದು ಖಡಕ್ ಆಗಿ ತಿರುಗೇಟು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


