ಕರ್ನಾಟಕ

ಮಾಧ್ಯಮಗಳ ಮೇಲೆ ಜೆಡಿಎಸ್‍ ಗೂಂಡಾಗಿರಿ: ಚುನಾವಣಾಧಿಕಾರಿಗೆ ದೂರು

ಮಂಡ್ಯದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾಧ್ಯಮಗಳನ್ನು ಗುರಿಯಾಗಿಸಿಕೊಂಡು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪತ್ರಕರ್ತರ ಒಕ್ಕೂಟ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‍ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದೆ.

ಮಾಧ್ಯಮಗಳ ಮೇಲೆ ಜೆಡಿಎಸ್‍ ಗೂಂಡಾಗಿರಿ: ಚುನಾವಣಾಧಿಕಾರಿಗೆ ದೂರು
ಸಾಂದರ್ಭಿಕ ಚಿತ್ರ
Published On :

ಮಂಡ್ಯ: ಚುನಾವಣಾ ಕದನ ಏರ್ಪಟ್ಟಿರುವ ಮಂಡ್ಯದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾಧ್ಯಮಗಳನ್ನು ಗುರಿಯಾಗಿಸಿಕೊಂಡು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪತ್ರಕರ್ತರ ಒಕ್ಕೂಟ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‍ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದೆ.

ಬುಧವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್‍ನಲ್ಲಿ ಮುಖ್ಯಮಂತ್ರಿ ಎಚ್‍.ಡಿ.ಕುಮಾರ ಸ್ವಾಮಿ ಅವರ ಪ್ರಚೋದಿತ ಹೇಳಿಕೆ ಹಿನ್ನೆಲೆಯಲ್ಲಿ ಜೆಡಿಎಸ್‍ ಕಾರ್ಯಕರ್ತರು ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಗೆ ಮುಂದಾಗಿ, ಮಾಧ್ಯಮಗಳ ವಾಹನಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಇಂತಹ ಹಲವಾರು ಘಟನೆಗಳು ಮರುಕಳಿಸುತ್ತಲೇ ಇದ್ದು, ಮಾಧ್ಯಮ ಪ್ರತಿನಿಧಿಗಳಿಗೆ ಸೂಕ್ತ ಭದ್ರತೆ ಕಲ್ಪಿಸುವುದು ಹಾಗೂ ಗೂಂಡಾಗಿರಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಪತ್ರಕರ್ತರ ಒಕ್ಕೂಟ ದೂರಿನಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.