ಬೆಂಗಳೂರು ಗ್ರಾಮಾಂತರ: ಗೆಲುವಿನ ನಿರೀಕ್ಷೆಯಲ್ಲಿ ಕಾಂಗ್ರೆಸ್
2008ರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಪುನರ್ ರಚನೆಯಾದ ಆರಂಭದಲ್ಲಿ ಜೆಡಿಎಸ್ ತದನಂತರ ಕಾಂಗ್ರೆಸ್ ಪ್ರಾಬಲ್ಯ ಸಾಧಿಸುತ್ತಾ ಬಂದಿದ್ದು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ. ಕೆ. ಸುರೇಶ್ ಗೆಲುವು ಸಾಧಿಸುವುದು ಬಹುತೇಕ ನಿಶ್ಚಿತವಾಗಿದೆ.

ಬೆಂಗಳೂರು:2008ರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಪುನರ್ ರಚನೆಯಾದ ಆರಂಭದಲ್ಲಿ ಜೆಡಿಎಸ್ ತದನಂತರ ಕಾಂಗ್ರೆಸ್ ಪ್ರಾಬಲ್ಯ ಸಾಧಿಸುತ್ತಾ ಬಂದಿದ್ದು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ. ಕೆ. ಸುರೇಶ್ ಗೆಲುವು ಸಾಧಿಸುವುದು ಬಹುತೇಕ ನಿಶ್ಚಿತವಾಗಿದೆ.
ಕಾಂಗ್ರೆಸ್ ಪ್ರಮುಖ ಹಿರಿಯ ನಾಯಕ ಡಿ. ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಬೆಂಬಲ ಇರುವುದರಿಂದ ಒತ್ತಡ ಕಡಿಮೆಯಾಗಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ಡಿ. ಕೆ. ಸುರೇಶ್ ಅವರನ್ನು ಬೆಂಬಲಿಸುತ್ತಿದ್ದಾರೆ. ಇದರಿಂದಾಗಿ ಅನಾಯಸವಾಗಿ ಗೆಲ್ಲಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ
2009ರಲ್ಲಿ ಜೆಡಿಎಸ್ ಪಕ್ಷದಿಂದ ಎಚ್ ಡಿ ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಗೆಲುವು ಕಂಡಿದ್ದರು. ನಂತರ 2013ರಲ್ಲಿ ನಡೆದ ಉಪ ಚುನಾವಣೆ ಹಾಗೂ 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಡಿಕೆ ಸುರೇಶ್ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಬಿಜೆಪಿ ಅಭ್ಯರ್ಥಿ ಅಶ್ವತ್ ನಾರಾಯಣ್ ಎಷ್ಟೋ ಜನರಿಗೆ ಗೊತ್ತೇ ಇಲ್ಲ. ಇದು ಕೂಡಾ ಡಿಕೆ ಸುರೇಶ್ ಅವರಿಗೆ ವರವಾಗಿ ಪರಿಣಮಿಸಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರ ಹಾಗೂ ಅನೇಕಲ್ ವಿಧಾನಸಭಾ ಕ್ಷೇತ್ರಗಳು ಈ ಕ್ಷೇತ್ರ ವ್ಯಾಪ್ತಿಗೆ ಸೇರಿವೆ. ಹೆಚ್ಚಿನ ಸಂಖ್ಯೆಯಲ್ಲಿ ಸಾಪ್ಟ್ ವೇರ್ ಎಂಜಿನಿಯರ್ ಗಳು ಇಲ್ಲಿ ವಾಸಿಸುತ್ತಿದ್ದಾರೆ. ಆದರೆ, ಎಷ್ಟು ಜನ ಟೆಕ್ಕಿಗಳು ಮತದಾನ ಮಾಡುತ್ತಾರೆ ಎಂಬುದು ಗೊತ್ತಿಲ್ಲ. ಈ ಏರಿಯಾದ ಸಂಸದರನ್ನೇ ನೋಡಿಯೇ ಇರಲಿಲ್ಲ ಎಂದು ಕೆಲವರು ಪ್ರಶ್ನಿಸುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


