ಮುಖ್ಯಮಂತ್ರಿಯಾಗಿ ಮೋದಿ ಮಾಡಿದ್ದಂತೆ ಅಮಾಯಕ ಜನರನ್ನು ಹತ್ಯೆ ಮಾಡಲ್ಲ- ಎಚ್ ಡಿ ಕುಮಾರಸ್ವಾಮಿ
ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಿದ್ದಂತೆ ನಾನು ಮುಗ್ದ ಜನರನ್ನು ಹತ್ಯೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಿದ್ದಂತೆ ನಾನು ಮುಗ್ದ ಜನರನ್ನು ಹತ್ಯೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬಾಬಾ ಸಾಹೇಬ್ ಅಂಬೇಡ್ಕರ್ ಅವರ 128 ಜಯಂತಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಪ್ರಧಾನಿ ಮೋದಿಯಿಂದ ನಾನು ಕಲಿಯಬೇಕಾದ ಅಗತ್ಯವೇನಿಲ್ಲ, ಮುಖ್ಯಮಂತ್ರಿಯಾಗಿ ಮುಗ್ದ ಜನರ ಬದುಕಿನೊಂದಿಗೆ ನಾನು ಚೆಲ್ಲಾಟವಾಡುವುದಿಲ್ಲ ಎಂದರು.
ಐಟಿ ದಾಳಿಗಳ ಬಗ್ಗೆ ನನ್ನಗೆ ಭಯವಿಲ್ಲ, ದೇವೇಗೌಡರು ಊಟಕ್ಕಾಗಿ ಯಾರ ಮನೆಗೂ ಹೋದರೂ ಅಲ್ಲಿಯೂ ಐಟಿ ದಾಳಿ ಮಾಡಲಾಗುತ್ತಿದೆ. ಇದು ಎಂತಹ ಸರ್ಕಾರ ಎಂದು ಟೀಕಿಸಿದರು.
ಮಾರ್ಚ್ 28 ರಂದು ರಾಜ್ಯದ ವಿವಿಧೆಡೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ 1. 66 ಕೋಟಿ ನಗದನ್ನು ವಶಪಡಿಸಿಕೊಂಡಿತ್ತು. ಬಿಜೆಪಿ ಜೊತೆಗೆ ಸರ್ಕಾರ ರಚಿಸಲು ಕುಮಾರಸ್ವಾಮಿ ಒಪ್ಪದ ಕಾರಣ ಬಿಜೆಪಿ ಬೇಕೆಂತಲೆ ದಾಳಿ ನಡೆಸುತ್ತಿದೆ ಎಂದು ದೇವೇಗೌಡರು ಆರೋಪಿಸಿದ್ದರು.
ಕರ್ನಾಟಕದಲ್ಲಿ ಏಪ್ರಿಲ್ 18 ಹಾಗೂ 23 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಮೇ 23 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


