ಕರ್ನಾಟಕ

ಸುಮಲತಾ ಅಂಬರೀಷ್ ಗೆ ಹೆಚ್ಚಿನ ಭದ್ರತೆ ನೀಡುವಂತೆ ಡಿಜಿ, ಐಜಿಪಿಗೆ ಚುನಾವಣಾ ಆಯೋಗ ಸೂಚನೆ

ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಚುನಾವಣಾ ಆಯೋಗ ಪತ್ರ ಬರೆದಿದೆ.

ಸುಮಲತಾ ಅಂಬರೀಷ್ ಗೆ ಹೆಚ್ಚಿನ ಭದ್ರತೆ ನೀಡುವಂತೆ ಡಿಜಿ, ಐಜಿಪಿಗೆ ಚುನಾವಣಾ ಆಯೋಗ ಸೂಚನೆ
ಸುಮಲತಾ ಅಂಬರೀಷ್
Published On :

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೆ  ಹೆಚ್ಚಿನ ಭದ್ರತೆ ಒದಗಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಚುನಾವಣಾ ಆಯೋಗ ಪತ್ರ ಬರೆದಿದೆ.

ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಎದುರಾಳಿ ಸುಮಲತಾ ಅಂಬರೀಷ್ ಹಾಗೂ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಯಾದರೆ ನಾವು ಜವಾಬ್ದಾರಲ್ಲ ಎಂಬರ್ಥದಲ್ಲಿ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು.

ಈ ಹೇಳಿಕೆಯಿಂದ ಆತಂಕಗೊಂಡಿದ್ದ ಸುಮಲತಾ ಅಂಬರೀಷ್  ಪರ ಚುನಾವಣಾ ಏಜೆಂಟ್ ಮದನ್ ಕುಮಾರ್ , ಸುಮಲತಾ ಅಂಬರೀಷ್ ಅವರಿಗೆ  ಭದ್ರತೆ ಹೆಚ್ಚಿಸುವಂತೆ ಚುನಾವಣಾ ಆಯೋಗಕ್ಕೆ ಇ- ಮೇಲ್  ಮೂಲಕ ದೂರು ಸಲ್ಲಿಸಿದ್ದರು.

ಈ ದೂರಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ರಾಜ್ಯ ಚುನಾವಣಾ ಆಯೋಗ, ಸುಮಲತಾ ಅಂಬರೀಷ್ ಅವರಿಗೆ ಭದ್ರತೆ ವಿಚಾರದಲ್ಲಿ ಪರಿಶೀಲಿಸುವಂತೆ  ಹಾಗೂ 24 ಗಂಟೆಯೊಳಗೆ ಈ ಸಂಬಂಧ ವರದಿ ಸಲ್ಲಿಸುವಂತೆ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.