ಕರ್ನಾಟಕ

ಸುಮಲತಾ ಬಗ್ಗೆ ನನಗೆ ತುಂಬಾ ಗೌರವ ಇದೆ- ರಿಯಲ್ ಸ್ಟಾರ್ ಉಪೇಂದ್ರ

ತೀವ್ರ ಜಿದ್ದಾಜಿದ್ದಿನ ಹಣಾಹಣಿ ಏರ್ಪಟ್ಟಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಬಗ್ಗೆ ತುಂಬಾ ಗೌರವ ಇರುವುದಾಗಿ ರಿಯಲ್ ಸ್ಟಾರ್ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹೇಳಿದ್ದಾರೆ.

ಸುಮಲತಾ ಬಗ್ಗೆ ನನಗೆ ತುಂಬಾ ಗೌರವ ಇದೆ- ರಿಯಲ್ ಸ್ಟಾರ್  ಉಪೇಂದ್ರ
ಉಪೇಂದ್ರ
Published On :

ಕೊಪ್ಪಳ: ತೀವ್ರ ಜಿದ್ದಾಜಿದ್ದಿನ ಹಣಾಹಣಿ ಏರ್ಪಟ್ಟಿರುವ  ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ  ಅಭ್ಯರ್ಥಿ ಸುಮಲತಾ ಅಂಬರೀಷ್ ಬಗ್ಗೆ ತುಂಬಾ ಗೌರವ ಇರುವುದಾಗಿ ರಿಯಲ್ ಸ್ಟಾರ್  ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ಅವರು,ಸುಮಲತಾ ಬಗ್ಗೆ ನನಗೆ ತುಂಬಾ ಗೌರವ ಇದೆ, ಸುಮಲತಾ ನಮ್ಮ ಅತ್ತಿಗೆ ಇದ್ದಂಗೆ ಎಂದಿದ್ದಾರೆ. ರೇಬಲ್ ಸ್ಟಾರ್ ಅಂಬರೀಷ್  ನನ್ನ ಅಣ್ಣ, ಸುಮಲತಾ ಅಂಬರಿಶ್  ಅತ್ತಿಗೆ ಇದ್ದ ಹಾಗೆ ಅವರ ಮೇಲೆ ಅಪಾರ ಗೌರವವನ್ನು ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.

ಸುಮಲತಾ ಅಂಬರೀಷ್ ಅವರಿಗೆ ಚುನಾವಣೆಯಲ್ಲಿ ಒಳ್ಳೆದಾಗುತ್ತೆ , ಉತ್ತಮ ಭವಿಷ್ಯ ಇರುವುದಾಗಿ ಹೇಳಿದರು. ಇನ್ನೂ ಉತ್ತಮ ಪ್ರಜಾಕೀಯ ಪಕ್ಷದ ಪರ ನಾನು ನಟನಾಗಿ ಮತ ಕೇಳ್ತಾ ಇಲ್ಲ, ನಟನಾಗಿ ಓಟು ಕೇಳಿದರೆ ನಿವೇಲ್ಲಾ ನಗುತ್ತೀರಾ ಇದರಿಂದ ಒಳ್ಳೆಯ ವಿಚಾರಗಳಿಗೆ ಮತ ಹಾಕಿ ಎಂದು ಕೇಳ್ತಾ ಇದೀನಿ ಎಂದು ತಿಳಿಸಿದರು.

ಇನ್ನು ಇದೇ ಸಂದರ್ಭದಲ್ಲಿ ಸುಂದರವಾದ ಕಲ್ಪನೆ ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇನೆ. ದಯವಿಟ್ಟು ಉತ್ತಮ ಪ್ರಜಾಕೀಯ ಪಕ್ಷ ಬೆಂಬಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.