ಕರ್ನಾಟಕ

ನಾವು ವ್ಯಕ್ತಿ ಪೂಜೆ ಮಾಡಲ್ಲ, ಪಕ್ಷ ಪೂಜೆ ಮಾಡುತ್ತೇವೆ: ಮೋದಿ ಘೋಷಣೆಗೆ ಡಿಕೆಶಿ ಟಾಂಗ್

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸಂಸದರ ಸಂಖ್ಯೆಯನ್ನು ಒಂದಂಕಿಗೆ ಇಳಿಸುತ್ತೇವೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್...

ನಾವು ವ್ಯಕ್ತಿ ಪೂಜೆ ಮಾಡಲ್ಲ, ಪಕ್ಷ ಪೂಜೆ ಮಾಡುತ್ತೇವೆ: ಮೋದಿ ಘೋಷಣೆಗೆ ಡಿಕೆಶಿ ಟಾಂಗ್
ಡಿ ಕೆ ಶಿವಕುಮಾರ್
Published On :
ಮಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸಂಸದರ ಸಂಖ್ಯೆಯನ್ನು ಒಂದಂಕಿಗೆ ಇಳಿಸುತ್ತೇವೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.
ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಡಿಕೆಶಿ, ನರೇಂದ್ರ ಮೋದಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಬಿಜೆಪಿ ಕಳೆದ ಬಾರಿ ಸುಳ್ಳಿನ ಆಧಾರದಲ್ಲಿ ಸರ್ಕಾರ ರಚಿಸಿತ್ತು. ಈ ಬಾರಿ ಅದು ಸಾಧ್ಯವಿಲ್ಲ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಗೆ ಹೆಚ್ಚು ಲಾಭವಾಗಲಿದ್ದು, ರಾಜ್ಯ 28 ಕ್ಷೇತ್ರಗಳಲ್ಲಿ ಬಿಜೆಪಿ ಒಂದಂಕಿಗಿಂತ ಹೆಚ್ಚು ಸ್ಥಾನ ಗಳಿಸಲು ಬಿಡುವುದಿಲ್ಲ ಎಂದರು.
ಇದೇ ವೇಳೆ ಸ್ಥಳೀಯ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆಶಿ, 
ಜಿಲ್ಲೆಯ ಜನರು ಉದ್ಯೋಗ ಅರಸಿ ವಲಸೆ ಹೋಗುತ್ತಿದ್ದಾರೆ. ಸಣ್ಣ ಯೋಜನೆಯನ್ನೂ ಜಿಲ್ಲೆಗೆ ತರಲು ನಳಿನ್ ಕುಮಾರ್ ಗೆ ಸಾಧ್ಯವಾಗಿಲ್ಲ. ಮೋದಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ ಎಂದರು.
ಹಿಂದೂ ಸಂಸ್ಕೃತಿ ಅರಿತುಕೊಂಡಿರುವ ಮಿಥುನ್ ರೈಗೆ ಈ ಬಾರಿ ಜಿಲ್ಲೆಯ ಜನ ಆಶೀರ್ವಾದ ಮಾಡಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ನಾವು ವ್ಯಕ್ತಿ ಪೂಜೆ ಮಾಡಲ್ಲ, ಪಕ್ಷ ಪೂಜೆ ಮಾಡುತ್ತೇವೆ ಎಂದು ಬಿಜೆಪಿಯವರ ಮೋದಿ ಘೋಷಣೆಗೆ ಟಾಂಗ್ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.